ಪ್ರಧಾನ ಸುದ್ದಿ

ಮಡಿಕೇರಿ ಗಲಭೆ; ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶ

Lingaraj Badiger

ಮೈಸೂರು: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವೇಳೆ ಮಡಿಕೇರಿಯಲ್ಲಿ ಸಂಭವಿಸಿದ ಗಲಭೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರಾದೇಶಿಕ ಆಯುಕ್ತರಿಂದ ಪ್ರಕರಣದ ತನಿಖೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರ ನೇತೃತ್ವದಲ್ಲಿ ಮಡಿಕೇರಿ ಗಲಭೆ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣದ ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು, ಕೊಡಗಿಗೆ ಕೇರಳದಿಂದ ಜನ ಬಂದಿದ್ದರೂ ಎನ್ನಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಒಂದು ವೇಳೆ ಹೊರಗಿನಿಂದ ಜನ ಬಂದಿದ್ದರೆ, ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಮಧ್ಯೆ, ಗಲಭೆಯಲ್ಲಿ ಸಂಭವಿಸಿದ ಕುಟ್ಟಪ್ಪ ಸಾವನ್ನು ಹತ್ಯೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದು, ಗಲಭೆಗೆ ಸಂಬಂಧಿಸಿದಂತೆ 22 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆಗೆ ವಿಎಚ್ ಪಿ ಆಗ್ರಹ

ಮಡಿಕೇರಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಎಚ್ ಪಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸಿದೆ.

SCROLL FOR NEXT