ಸಿದ್ದರಾಮಯ್ಯ - ನಿತಿಶ್ ಕುಮಾರ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನಿತಿಶ್ ಪ್ರಮಾಣವಚನ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಮಹಾಮೈತ್ರಿಕೂಟದ ನಾಯಕ ನಿತಿಶ್ ಕುಮಾರ್ ಅವರು ತಾವು ಮೂರನೇ ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ....

ಬೆಂಗಳೂರು: ಮಹಾಮೈತ್ರಿಕೂಟದ ನಾಯಕ ನಿತಿಶ್ ಕುಮಾರ್ ಅವರು ತಾವು ಮೂರನೇ ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ.

ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ, ನವೆಂಬರ್ 20ರಂದು ನಡೆಯುವ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಸಿಎಂ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಪದಗ್ರಹಣ ಕಾರ್ಯಕ್ರಮದಲ್ಲಿ  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾ ನವೀನ್ ಪಟ್ನಾಯಕ್ ಸೇರಿದಂತೆ ಹಲವು ಮುಖ್ಯಮಂತ್ರಿಗಳು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. 36 ಸಂಪುಟ ಸದಸ್ಯರೊಂದಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?