ಶಾಸಕ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ(ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಎಲ್ಲ ಪಕ್ಷಗಳಲ್ಲೂ ಬೆಳೆದ ನಾಗಮಾರಪಳ್ಳಿ

ಮಂಗಳವಾರ ನಿಧನರಾದ ಬೀದರ್ ಉತ್ತರ ಕ್ಷೇತ್ರದ ಶಾಸಕ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದವರು. 6 ಬಾರಿ ಶಾಸಕರಾಗಿ ಹಾಗೂ ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವಿ ರಾಜಕಾರಣಿ...

ಬೀದರ್: ಮಂಗಳವಾರ ನಿಧನರಾದ ಬೀದರ್ ಉತ್ತರ ಕ್ಷೇತ್ರದ ಶಾಸಕ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದವರು. 6 ಬಾರಿ ಶಾಸಕರಾಗಿ ಹಾಗೂ ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವಿ ರಾಜಕಾರಣಿ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್ ಅವಧಿಯಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾಗಿ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಸ್ವಸಹಾಯ ಗುಂಪುಗಳ ರಚನೆಯ ಮೂಲಕ ವಿಶ್ವದ ವಿವಿಧ ದೇಶಗಳ ಸಹಕಾರ ರಂಗದ ಗಮನ ಸೆಳೆದಿದ್ದರು. ನ.11ರಂದು ತಮ್ಮ 74ನೇ ಜನ್ಮ ದಿನಾಚರಣೆಯನ್ನು ಸ್ವಸಹಾಯ ಸಂಘಗಳ ದಿನವನ್ನಾಗಿ ಆಚರಿಸಿಕೊಂಡಿದ್ದರು. ಅಲ್ಲದೆ, ವಿಧಾನಮಂಡಲ ಅಧಿವೇಶನದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಅವರು ಅನಾರೋಗ್ಯದಿಂದ ಆರ್.ಟಿ. ನಗರ ಬಡಾವಣೆಯ ತಮ್ಮ ನಿವಾಸದಲ್ಲೇ ಉಳಿದುಕೊಂಡಿದ್ದರು. ಆದರೆ, ಹೃದಯ ಬಡಿತ ನಿಲ್ಲಿಸಿದ್ದರಿಂದ ಇಹಲೋಕ ತ್ಯಜಿಸಿದ್ದಾರೆ.

ಇವರಿಗೆ ಕಲಬುರ್ಗಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ನಾಗಮಾರಪಳ್ಳಿ ಅವರ ಪುತ್ರ ಉಮಾಕಾಂತ ನಾಗಮಾರಪಲ್ಲಿ ಹಾಗೂ ಪತ್ನಿ ಸರಸ್ವತಿ ಈ ಹಿಂದೆಯೇ ಮೃತಪಟ್ಟಿದ್ದು, ಇನ್ನೊಬ್ಬ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯುವುದಕ್ಕೆ ತೀವ್ರ ಪ್ರಯತ್ನ ನಡೆಸಿದ್ದರು.

ಇದರಿಂದಾಗಿ ಬಿಜೆಪಿ ಮುಖಂಡರ ಜತೆಗಿನ ಅವರ ವಿಶ್ವಾಸ ಹಳಸಿತ್ತು. ಸಹಕಾರ ಚಳವಳಿಯಿಂದ ಆರಂಭಗೊಂಡ ಇವರ ರಾಜಕೀಯ ಬದುಕು, ಜನತಾ ಪರಿವಾರ, ಕಾಂಗ್ರೆಸ್, ಕೆಜೆಪಿ, ಬಿಜೆಪಿಯಲ್ಲಿ ಬೆಳೆದಿದ್ದು ಕುತೂಹಲಕಾರಿ ಸಂಗತಿ.

ಮೊನ್ನೆಯಷ್ಟೇ 74ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಗುರುಪಾದಪ್ಪ ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಸಹಕಾರಿ ಕ್ಷೇತ್ರದ ಧುರೀಣ ಸಹಕಾರಿ ಸಪ್ತಾಹದ ನಡುವೆಯೇ ಅಗಲಿರುವುದು ಅಚ್ಚರಿ ಹಾಗೂ ಕಾಕತಾಳೀಯ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.
● ಸಿದ್ದರಾಮಯ್ಯ ಮುಖ್ಯಮಂತ್ರಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ