ಹುಚ್ಚ ವೆಂಕಟ್ 
ಪ್ರಧಾನ ಸುದ್ದಿ

ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಹುಚ್ಚ ವೆಂಕಟ್ ಮುಖಕ್ಕೆ ಮಸಿ

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸಹ ಸ್ಪರ್ಧಿ ರವಿ ಮುರೂರು ಮೇಲೆ ಹಲ್ಲೆ ನಡೆಸಿ ವಿವಾದಕ್ಕೆ ಕಾರಣವಾಗಿದ್ದ ಹುಚ್ಚ ವೆಂಕಟ್ ಅವರ ಮುಖಕ್ಕೆ ದಲಿತ...

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸಹ ಸ್ಪರ್ಧಿ ರವಿ ಮುರೂರು ಮೇಲೆ ಹಲ್ಲೆ ನಡೆಸಿ ವಿವಾದಕ್ಕೆ ಕಾರಣವಾಗಿದ್ದ ಹುಚ್ಚ ವೆಂಕಟ್ ಅವರ ಮುಖಕ್ಕೆ ದಲಿತ ಸಂಘಟನೆಯ ಕಾರ್ಯಕರ್ತರು ಮಸಿ ಬಳಿದ ಘಟನೆ ಬುಧವಾರ ನಡೆದಿದೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ . ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ಇಂದು ಈಟಿವಿ ಚಾನೆಲ್ ಕಚೇರಿಗೆ ಆಗಮಿಸುತ್ತಿದ್ದ ಹುಚ್ಚ ವೆಂಕಟ್ ಮುಖಕ್ಕೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಅಂಬೇಡ್ಕರ್ ಮೇಲೆ ಗೌರವ ಇದೆ. ಯಾರೋ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ನಾನು ಯಾರ ವಿರುದ್ಧವೂ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಯಾರ ಮನಸ್ಸಿಗೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಖಾಸಗಿ  ಚಾನೆಲ್ ನಲ್ಲಿ ಸಮಜಾಯಿಷಿ ನೀಡಿದ್ದಾರೆ.

ರವಿ ಮೂರೂರ್ ಮೇಲೆ ಹಲ್ಲೆ ನಡೆಸಿ ಬಿಗ್ ಬಾಸ್ ಶೋನಿಂದ ಹೊರಬಿದ್ದ ಬಳಿಕ ಸಾಹಿತಿ ಗಿರೀಶ್ ಕಾರ್ನಾಡ್ ಹಾಗೂ ನಟ ಕಿಚ್ಚ ಸುದೀಪ್ ವಿರುದ್ಧ ಅವಾಜ್ ಹಾಕಿದ್ದರು. ಇದೀಗ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel