ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಬಂಧನ
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಮಾರು ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಎಸ್ಐಟಿ ಅಧಿಕಾರಿಗಳು...
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಮಾರು ಎರಡು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಎಸ್ಐಟಿ ಅಧಿಕಾರಿಗಳು ಶುಕ್ರವಾರ ಮತ್ತೆ ಬಂಧಿಸಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಈಗಾಗಲೇ 13 ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ರೆಡ್ಡಿ ವಿರುದ್ಧ ಈಗ ಎಸ್ಐಟಿ ಮತ್ತೊಂದು ಹೊಸ ಪ್ರಕರಣ ದಾಖಲಿಸಿದ್ದು, ಆ ಪ್ರಕರಣದ ವಿಚಾರಣೆಗಾಗಿ ಇಂದು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ರೆಡ್ಡಿಗೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ರೆಡ್ಡಿ ಇಂದು ಬೆಳಗ್ಗೆ ಬೆಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.