ಪ್ರಧಾನ ಸುದ್ದಿ

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಡಿ.3ರವರೆಗೆ ನ್ಯಾಯಾಂಗ ಬಂಧನ

Lingaraj Badiger

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ)ದಿಂದ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಕಳೆದ ಶುಕ್ರವಾರ ರೆಡ್ಡಿಯನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ನವೆಂಬರ್ 23ರವರೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇಂದು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದರು.

ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗೆ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬ್ಲಾಕ್‌ ಬೋರ್ಡ್‌ ಮೈನ್ಸ್‌ ಕಂಪನಿ ಹೆಸರಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಮತ್ತು ಅದಿರು ರಫ್ತು ಮಾಡಿದ ಆರೋಪದ ಮೇಲೆ ರೆಡ್ಡಿ ಅವರನ್ನು ಮತ್ತೆ ಬಂಧಿಸಲಾಗಿದೆ.

SCROLL FOR NEXT