ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣಾ ದಿನಾಂಕ ಪ್ರಕಟಿಸಿದ್ದು, ಡಿಸೆಂಬರ್ 27ರಂದು ಮತದಾನ ನಡೆಯಲಿದೆ.
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಡಿ. 2ರಂದು ಚುನಾವಣಾ ಅಧಿಸೂಚನೆ ಪ್ರಕಟಿಸುತ್ತಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.9 ಕಡೆಯ ದಿನವಾಗಿದೆ. ಡಿ.10ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಡಿ.12 ಕೊನೆಯ ದಿನವಾಗಿದೆ.
ಡಿ.27ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿ.30ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುವ ಈ ಚುನಾವಣೆ ಕಾಂಗ್ರೆಸ್‍ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೂ, ಆಂತರಿಕ ಹೊಯ್ದಾಟವೇ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಚುನಾವಣೆ ಪೂರ್ವಭಾವಿ ಸಭೆಯನ್ನು ನಡೆಸುವುದಕ್ಕೆ ಉತ್ಸಾಹ ತೋರುವ ಬದಲು ದಿನ ಮುಂದಕ್ಕೆ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ.
ಇನ್ನು ವಿಧಾನ ಪರಿಷತ್‍ನಲ್ಲಿ ಸದ್ಯಕ್ಕೆ ಬಿಜೆಪಿ ಮತ್ತು ಜೆಡಿಎಸ್ ಸಂಖ್ಯಾ ಬಲವೇ ಅಧಿಕವಾಗಿರುವುದರಿಂದ ಪರಿಷತ್ ನಲ್ಲಿ ಮೇಲುಗೈ ಸಾಧಿಸುವ ಅನಿವಾರ್ಯತೆ ಕಾಂಗ್ರೆಸ್ ನಾಯಕತ್ವದ ಮುಂದೆ ಇದೆ.