ಎಚ್.ಕೆ.ಪಾಟೀಲ್ 
ಪ್ರಧಾನ ಸುದ್ದಿ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಪಂಚಾಯತ್ ರಾಜ್ ತಿದ್ದುಪಡಿ...

ಬೆಂಗಳೂರು: ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಗುರುವಾರ ವಿಧಾನಸಭೆ ಅಂಗೀಕಾರ ದೊರೆತಿದೆ.

ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಮಗ್ರ ಬದಲವಣೆ ತರುವ ಉದ್ದೇಶಕ್ಕಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ವಿಧೇಯಕ ರೂಪದಲ್ಲಿ ಮಂಡಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರ ರಾಜಿನಾಮೆ ಅಗ್ರಹಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಧರಣಿ ನಡೆಸುತ್ತಿದ್ದರು. ಪ್ರತಿಪಕ್ಷಗಳ ಗದಲ್ಲದ ನಡುವೆಯೂ ಎಚ್.ಕೆ.ಪಾಟೀಲ್ ಅವರು 155 ಪುಟಗಳ ಭಾರಿ ವಿಧೇಯಕವನ್ನು ಮಂಡಿಸಿದರು. ಬಳಿಕ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.

ಈ ತಿದ್ದುಪಡಿ ವಿಧೇಯಕ ಪಂಚಾಯ್ತಿಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು, ಗ್ರಾಮ ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ಅಧಿಕಾರವಧಿ ಐದು ವರ್ಷಗಳಿಗೆ ವಿಸ್ತರಿಸಲಾಗಿದೆ. ಅಲ್ಲದೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡುವ ಮಹತ್ವದ ತಿದ್ದುಪಡಿ ಈ ವಿಧೇಯಕದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!