ನಿರ್ದೇಶಕ ಅಲಿ ಅಕ್ಬರ್ 
ಪ್ರಧಾನ ಸುದ್ದಿ

ಮದರಸಾದಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯ ನಡೆದಿತ್ತು: ಚಿತ್ರ ನಿರ್ದೇಶಕ

ಕೇರಳ ಮೂಲದ ಪತ್ರಕರ್ತೆಯೊಬ್ಬರು ಮದರಸಾದಲ್ಲಿ ಓದುತ್ತಿದ್ದಾಗ ತನ್ನ ಸಹಪಾಠಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಹೇಳಿದ ಬೆನ್ನಲ್ಲೇ, ...

ತಿರುವನಂತಪುರ: ಕೇರಳ ಮೂಲದ ಪತ್ರಕರ್ತೆಯೊಬ್ಬರು ಮದರಸಾದಲ್ಲಿ ಓದುತ್ತಿದ್ದಾಗ ತನ್ನ ಸಹಪಾಠಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಹೇಳಿದ ಬೆನ್ನಲ್ಲೇ, ಇದೀಗ ಮಲೆಯಾಳಂನ ಚಿತ್ರ ನಿರ್ದೇಶಕರೊಬ್ಬರು ತನ್ನ ಮೇಲೂ ಮದರಸಾದಲ್ಲಿ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಸೋಮವಾರ ಹೇಳಿದ್ದಾರೆ.

ನಾನು ಯುವಕನಾಗಿದ್ದಾಗ ಮದರಸಾಗೆ ಭೇಟಿ ನೀಡಿದಾಗ ಅಲ್ಲಿನ ಶಿಕ್ಷಕರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ನಿರ್ದೇಶಕ ಅಲಿ ಅಕ್ಬರ್ ಅವರು ಹೇಳಿಕೊಂಡಿದ್ದಾರೆ.

ಕೇರಳದ ಮದರಸಾಗಳಲ್ಲಿ ಸಾಕಷ್ಟು ಜನರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಆದರೆ ಧರ್ಮದ ಭಯದಿಂದ ಯಾರೂ ಹೇಳಿಕೊಳ್ಳಲ್ಲ ಎಂದು ಚಿತ್ರ ನಿರ್ಮಾಪಕರು ತಿಳಿಸಿದ್ದಾರೆ.

ಧಾರ್ಮಿ ಮುಖಂಡರು ಮದರಸಾಗಳಲ್ಲಿನ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಾತನಾಡುವವರನ್ನು ಸಾಯಿಸುತ್ತಾರೆ ಎಂದು ಅಕ್ಬರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ವೊಟ್ ಬ್ಯಾಂಕ್‌ಗಾಗಿ ಅಂತವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲ್ಲ ಎಂದು ದೂರಿದ್ದಾರೆ.

ಗೋಮಾಂಸಕ್ಕೆ ಸಂಬಂಧಿಸಿದಂತೆ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಮದರಸಾಗಳಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ಧ ಇದುವರೆಗೂ ಒಂದೇ ಒಂದು ಪ್ರತಿಭಟನೆ ನಡೆದಿಲ್ಲ ಎಂದು ಅಕ್ಬರ್ ತೀವ್ರ ಅಸಮಾಧಾನ್ಯ ವ್ಯಕ್ತಪಡಿಸಿದ್ದಾರೆ.

ಪ್ರತಿಷ್ಠಿತ ಮಲಯಾಳಂ ಪತ್ರಿಕೆಯೊಂದರಲ್ಲಿ ಹಿರಿಯ ಪತ್ರಕರ್ತೆಯಾಗಿರುವ ಕೋಝಿಕ್ಕೋಡ್ ಮೂಲದ ವಿಪಿ ರಜೀನಾ ಮದರಸಾದಲ್ಲಿ ಓದುತ್ತಿದ್ದಾಗ ತನ್ನ ಸಹಪಾಠಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದುನವೆಂಬರ್ 21 ರಂದು ಫೇಸ್‌ಬುಕ್ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಹಾಕಿದ ನಂತರ ಅವರಿಗೆ ಬೆದರಿಕೆ ಕರೆಗಳು ಬರತೊಡಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT