ಹೈಕೋರ್ಟ್‍ನಲ್ಲಿ ಮನವಿ ಸಲ್ಲಿಸಿ: ರಾಜ್ಯಕ್ಕೆ ಸುಪ್ರೀಂ ಸೂಚನೆ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ ಮೂರು ಭೂಸಂಬಂಧಿ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಕುರಿತಂತೆ ರಾಜ್ಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ...
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ ಮೂರು ಭೂಸಂಬಂಧಿ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಕುರಿತಂತೆ ರಾಜ್ಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಜೆ. ಚೆಲಮೇಶ್ವರ್ ಮತ್ತು ಎ.ಎಂ. ಸಪ್ರೆ ಇದ್ದ ಪೀಠ ಹೈಕೋರ್ಟ್ ಮೊರೆ ಹೋಗುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು. ಬನಶಂಕರಿ 5ನೇ ಹಂತ, ಬಿಟಿಎಂ 4ನೇ ಹಂತ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಸ್ತರಣೆಗೆ ಸಂಬಂಧಿಸಿದಂತೆ ಬಿಡಿಎ ವಶಪಡಿಸಿಕೊಂಡಿದ್ದ ಭೂಮಿಯನ್ನು ಆಗಿನ ಸಿಎಂ ಯಡಿಯೂರಪ್ಪ ಮಾಡಿದ್ದ ಡಿನೋಟಿಫಿಕೇಶನ್ ಕುರಿತ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಡಿನೋಟಿಫಿಕೇಷನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಎಜಿ ವರದಿ ಆಧರಿಸಿ ಲೋಕಾಯುಕ್ತದ ಮುಂದೆ ದೂರು ಸಲ್ಲಿಸಲಾಗಿತ್ತು. ಬೊಕ್ಕಸಕ್ಕೆ ಅಪಾರ ನಷ್ಟ ಉಂಟು ಮಾಡಿದ ಈ ಕ್ರಮದಲ್ಲಿ ಅಧಿಕಾರ ದುರುಪಯೋಗನಡೆದಿದೆ ಎಂದು ವಾದಿಸಲಾಗಿತ್ತು. ಇಂಥ ಪ್ರಕರಣದ ವಿಚಾರ ಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಸಮಂಜಸವಲ್ಲ ಎಂಬುದು ರಾಜ್ಯದ ವಾದವಾಗಿತ್ತು.