ಬಿಎಸ್ ಯಡಿಯೂರಪ್ಪ 
ಪ್ರಧಾನ ಸುದ್ದಿ

ಲೋಕಾತಂಕದ ನಡುವೆ ಬಿಎಸ್‍ವೈ ನಿರಾಳ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಾನೂನು ಹೋರಾಟದಲ್ಲಿ ಮಹತ್ವದ ಜಯ ಸಿಕ್ಕಿದ್ದು...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಾನೂನು ಹೋರಾಟದಲ್ಲಿ ಮಹತ್ವದ ಜಯ ಸಿಕ್ಕಿದ್ದು, ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ನಾಲ್ಕು ಖಾಸಗಿ ದೂರುಗಳ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ರದ್ದು ಮಾಡಿದೆ. 
ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ದಾಖಲಿಸಲು ಅಂದಿನ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಈಗಾಗಲೇ ಹೈಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರಿನ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ, ಸೋಮವಾರ ಸ್ಥಗಿತಗೊಳಿಸಿದೆ. 
ಹೀಗಾಗಿ ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಭವಿಷ್ಯದ ಸ್ಥಾನಮಾನ ಏನು ಎಂಬ ಚರ್ಚೆಗೆ ಈಗ ಮತ್ತಷ್ಟು ಬಲ ಬಂದಿದೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ವಿಚಾರಣೆಯನ್ನು ಕೈ ಬಿಡುವಂತೆ ಯಡಿಯೂರಪ್ಪ ಪರ ವಕೀಲರು ಲೋಕಾಯುಕ್ತ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. 
ಮನವಿ ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಹಂತದಲ್ಲಿದ್ದ ನಾಲ್ಕು ಪ್ರಕರಣಗಳ ವಿಚಾರಣೆಯನ್ನು ಕೈಬಿಟ್ಟಿದೆ. ಆದರೆ, ರಾಚೇನಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಹಂತದಲ್ಲಿದೆ. 
ಅಕ್ರಮ ಡಿನೋಟಿಫಿಕೇಷನ್ ಆರೋಪ ಕುರಿತು ಖಾಸಗಿ ದೂರು ದಾಖಲಿಸಲು ವಕೀಲರಾದ ಸಿರಾಜಿನ್ ಬಾಷಾ ಮತ್ತು ಕೆ.ಎನ್. ಬಾಲರಾಜ್ ಅವರಿಗೆ ರಾಜ್ಯಪಾಲರು ನೀಡಿದ್ದ ಅನುಮತಿ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‍ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್. ಕೆ. ಮುಖರ್ಜಿ ಮತ್ತು ನ್ಯಾ. ವಿನೀತ್ ಸರಣ್ ಅವರಿದ್ದ ವಿಭಾಗೀಯ ಪೀಠ ನ.24ರಂದು ರಾಜ್ಯಪಾಲರ ಅನುಮತಿ ರದ್ದುಪಡಿಸಿ ಆದೇಶ ಹೊರಡಿಸಿತ್ತು. 
ಕಾನೂನುಗಳ ಸಂಕಷ್ಟಗಳನ್ನು ಒಂದೊಂದೇ ನಿವಾರಿಸಿಕೊಂಡು ಬರುತ್ತಿರುವ ಯಡಿಯೂರಪ್ಪ ಈಗ ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಲು ಕಾತುರರಾಗಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಈ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ