ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ, ನಾಡ ಬಾಂಬೊಂದನ್ನು ತಯಾರಿಸುವಾಗ ಅದು ಸ್ಫೋಟಗೊಂಡು ಇಬ್ಬರು ಮೃತಪಟ್ಟು, ಮತ್ತೊಬ್ಬನಿಗೆ ಗಾಯಗಳಾಗಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ರಾಜಧಾನಿಯಿಂದ ೨೦೦ ಕಿಮೀ ದೂರದಲ್ಲಿರುವ ಹರಿಹರಪುರದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.
"ತಾವೇ ತಯಾರಿಸುತ್ತಿದ್ದ ಬಾಂಬ್ ಸಿಡಿದು ಇಬ್ಬರು ಮೃತಪಟ್ಟಿದ್ದಾನೆ. ಮತ್ತೊಬ್ಬನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ" ಎಂದು ಪೊಲೀಸ್ ಸೂಪರಿಂಟೆಂಡೆಂತ್ ಸಿ ಸುಧಾಕರ್ ತಿಳಿಸಿದ್ದಾರೆ.
ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.