ಬಿಹಾರದಲ್ಲಿ ಬಿಜೆಪಿ ಗೆದ್ದರೆ ಗೋಹತ್ಯೆ ನಿಷೇಧ: ಸುಶೀಲ್ ಕುಮಾರ್ ಮೋದಿ
ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದರೆ, ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸುತ್ತೇವೆ ಎಂದು ಬಿಜೆಪಿ ಪಕ್ಷದ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ
ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದರೆ, ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸುತ್ತೇವೆ ಎಂದು ಬಿಜೆಪಿ ಪಕ್ಷದ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ಸೋಮವಾರ ಹೇಳಿದ್ದಾರೆ.
"ಬಿಜೆಪಿ ನಾಯಕತ್ವದ ಎನ್ ಡಿ ಎ ಸರ್ಕಾರ ರಚಿಸಿದರೆ ನಾವು ಗೋಹತ್ಯೆ ನಿಷೇಧಿಸುತ್ತೇವೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಹಸುಗಳ ಕಳ್ಳಸಾಗಾಣಿಕೆಯನ್ನು ತಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಾವಿರಾರು ಗೋವುಗಳ ಪ್ರಾಣವನ್ನು ಪ್ರಧಾನಿ ನರೇಂದ್ರ ಮೋದಿ ರಕ್ಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
"ಹಸುಗಳಿಗೆ ರಕ್ಷಣೆ ನೀಡಿ ಗೋ-ಪಾಲಕರ ಜೀವನದ ಕಲ್ಯಾಣದ ಬಗ್ಗೆ ಬಿಜೆಪಿ ಆಸ್ತೆ ವಹಿಸುತ್ತದೆ" ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.