ಪಾಕಿಸ್ತಾನಿ ಗಾಯಕ ಗುಲಾಂ ಅಲಿ 
ಪ್ರಧಾನ ಸುದ್ದಿ

ಶಿವಸೇನೆ ಅಸಹನೆ; ದೆಹಲಿಯಲ್ಲಿ ಪ್ರದರ್ಶನ ನೀಡಲು ಗುಲಾಂ ಅಲಿಗೆ ಆಹ್ವಾನ ನೀಡಿದ ಕೇಜ್ರಿವಾಲ್ ಸರ್ಕಾರ

ಮುಂಬೈನಲ್ಲಿ ನಡೆಯಬೇಕಿದ್ದ ಪಾಕಿಸ್ತಾನಿ ಗಾಯಕ ಗುಲಾಂ ಅಲಿ ಅವರ ಪ್ರದರ್ಶನಕ್ಕೆ ಶಿವಸೇನೆ ಪಕ್ಷ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕಾರ್ಯಕ್ರಮ ರದ್ದಾದ ಹಿನ್ನಲೆಯಲ್ಲಿ,

ನವದೆಹಲಿ: ಮುಂಬೈನಲ್ಲಿ ನಡೆಯಬೇಕಿದ್ದ ಪಾಕಿಸ್ತಾನಿ ಗಾಯಕ ಗುಲಾಂ ಅಲಿ ಅವರ ಪ್ರದರ್ಶನಕ್ಕೆ ಶಿವಸೇನೆ ಪಕ್ಷ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕಾರ್ಯಕ್ರಮ ರದ್ದಾದ ಹಿನ್ನಲೆಯಲ್ಲಿ, ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ಸಂಗೀತಗಾರನಿಗೆ ದೆಹಲಿಯಲ್ಲಿ ಪ್ರದರ್ಶನ ನೀಡಲು ಆಹ್ವಾನ ನೀಡಿದೆ. ಸಂಗೀತಕ್ಕೆ ಯಾವುದೇ ಗಡಿಯಿಲ್ಲ ಎಂದು ಕೂಡ ಹೇಳಿದ್ದಾರೆ.

ದೆಹಲಿಯಲ್ಲಿ ಪ್ರದರ್ಶನ ನೀಡಲು ಪಾಕಿಸ್ತಾನಿ ಗಾಯಕನಿಗೆ ಸ್ವಾಗತ ಎಂದು ದೆಹಲಿ ಸಾಂಸ್ಕೃತಿಕ ಸಚಿವ ಕಪಿಲ್ ಮಿಶ್ರ ಹೇಳಿದ್ದಾರೆ. "#ಗುಲಾಂ ಅಲಿ ಅವರಿಗೆ ಮುಂಬೈನಲ್ಲಿ ಪ್ರದರ್ಶನ ನೀಡಲು ಅವಕಾಶ ನೀಡದೆ ಇರುವುದು ದುರದೃಷ್ಟಕರ, ದೆಹಲಿಗೆ ಬಂದು ಸಂಗೀತ ಕಾರ್ಯಕ್ರಮ ನಡೆಸಿಕೊಡಲು ನಾನು ಆಹ್ವಾನ ನೀಡುತ್ತೇನೆ. ಸಂಗೀತಕ್ಕೆ ಯಾವುದೇ ಗಡಿಯಿಲ್ಲ. #ನಿಷೇಧವನ್ನೇ ನಿಷೇಧಿಸಿ" ಎಂದು ಅವರು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಶಿವಸೇನೆ ಕಾರ್ಯಕರ್ತರು ಮುಂಬೈನ ಕಾರ್ಯಕ್ರಮದ ಆಯೋಜಕರಿಗೆ ಬೆದರಿಕೆ ಹಾಕಿದ್ದರಿಂದ ಈ ಸಂಗೀತ ಕಾರ್ಯಕ್ರಮ ರದ್ದಾಗಿತ್ತು. ಪಾಕಿಸ್ತಾನ ಭಯೋತ್ಪಾದಕ ದೇಶವಾಗಿರುವುದರಿಂದ ಅಲ್ಲಿನ ಗಾಯಕರಿಗೆ ಅವಕಾಶ ನೀಡಬಾರದು ಎಂಬುದು ಶಿವಸೇನೆಯ ವಾದವಾಗಿತ್ತು.

ಈ ನಿಟ್ಟಿನಲ್ಲಿ ಕಾರ್ಯಕ್ರಮದ ಆಯೋಜಕರು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಅವರು ಸಹಕರಿಸಲು ನಿರಾಕರಿಸಿದ್ದರು.

ದಿವಂಗತ ಗಝಲ್ ಗಾಯಕ ಜಗಜಿತ್ ಸಿಂಗ್ ಅವರ ನೆನಪಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

11/9 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ

ಸೌದಿ ಮಿಲಿಟರಿ ಕಾರ್ಯಾಚರಣೆಗೆ ಹೌತಿ ಬಂಡುಕೋರರ ತಿರುಗೇಟು: ರಿಯಾದ್ ವಿಮಾನ ನಿಲ್ದಾಣ, ಅರಾಮ್ಕೊ ಸಂಸ್ಕರಣಾಗಾರ ಗುರಿಯಾಗಿಸಿಕೊಂಡು ದಾಳಿ!