ಬೆಂಗಳೂರು: ಸುಧೀಂದ್ರ ಕುಲಕರ್ಣಿ ಅವರಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣವನ್ನು ಖಂಡಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಸಾಹಿತಿ, ಚಿಂತಕರೆಲ್ಲಾ ಒಂದಾಗಿ ಹೋರಾಟ ನಡೆಸುವಂತೆ ಸಲಹೆ ನೀಡಿದ್ದಾರೆ.
ಸುಧೀಂದ್ರ ಕುಲಕರ್ಣಿ ಅವರಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿರುವ ಘಟನೆಯನ್ನು ಅಮಾನವೀಯ. ಇದು ಅಬಿsವೃಕ್ತಿ ಸ್ವಾತಂತ್ರ್ಯದ ಹರಣ ಎಂದು ಅವರು ಕಿಡಿಕಾರಿದ್ದಾರೆ. ಈ ದುರ್ಘಟನೆ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತು ಕ್ರಮಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ತಿಂಗಳ ಹಿಂದಷ್ಟೆ ನಡೆದಿರುವ ಎಂ.ಎಂ.ಕಲಬುರ್ಗಿ ಹತ್ಯೆ ಮತ್ತು ಪಾನ್ಸರೆ, ದಾದ್ರಿ ಹತ್ಯೆ ಖಂಡಿಸಿ ಪ್ರಸಿದಟಛಿ ಲೇಖಕ ಉದಯ ಪ್ರಕಾಶ್ ಸೇರಿದಂತೆ ಅನೇಕ ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿದ್ದಾರೆ.
ಜೀವಮಾನದ ಸಾಧನೆಗಾಗಿ ಸಿಕ್ಕಿರುವ ದೇಶದ ಅತ್ಯುನ್ನತ ಸಾಹಿತ್ಯ ಕ್ಷೇತ್ರದ ಪ್ರಶಸ್ತಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೇ ಹಿಂತಿರುಗಿಸುತ್ತಿದ್ದಾರೆ. ಹಾಗೆಯೇ ಅಕಾಡೆಮಿಗೆ ಶಶಿ ದೇಶಪಾಂಡೆ ಅವರಂಥ ಕೆಲವು ಸದಸ್ಯರು ರಾಜಿನಾಮೆ ಸಲ್ಲಿಸಿ ತಮ್ಮದೇ ರೀತಿಯಲ್ಲಿ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ದಯವಿಟ್ಟು ನಿಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಲೇಖಕರು, ಚಿಂತಕರು, ಸಾಮಾಜಿಕ ಕಾರ್ಯಕರ್ತರು ಪ್ರಶಸ್ತಿಗಳನ್ನು ವಾಪಸ್ ನೀಡುವ ಬದಲು ಜಾತ್ಯತೀತ ಸಿದ್ಧಾಂತವನ್ನು ಎತ್ತಿ ಹಿಡಿಯಲು ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸಲು ಒಗ್ಗೂಡಿ ಹೋರಾಟ ನಡೆಸಬೇಕಿದೆ ಎಂದು ಅವರು ಸಲಹೆ ನೀಡಿದ್ದಾರೆ.