ಹುಬ್ಬಳ್ಳಿ: ಪಾಕಿಸ್ತಾನದ ಮಾಜಿ ವಿದೇಶಾಂಗ ಮಂತ್ರಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಕ ಸುಧೀಂದ್ರ ಕುಲಕರ್ಣಿ ಮುಖಕ್ಕೆ ಮಸಿ ಬಳಿದ ಶಿವಸೇನಾ ಕಾರ್ಯಕರ್ತರ ಕಾರ್ಯವನ್ನು ಶ್ರೀರಾಮಸೇನೆ ಸಮರ್ಥಿಸಿಕೊಳ್ಳುತ್ತದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನ ಪರೋಕ್ಷವಾಗಿ ಹಾಗೂ ಪ್ರತ್ಯಕ್ಷವಾಗಿ ಯುದಟಛಿ ಮಾಡುತ್ತಿದೆ. ಹೀಗಿದ್ದರೂ ಪಾಕಿಸ್ತಾನದ ಮಾಜಿ ಸಚಿವನ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ಆಯೋಜನೆ ಮಾಡಿದವರಿಗೆ ಶಿವಸೇನೆ ತಕ್ಕ ಶಾಸ್ತಿ ಮಾಡಿದೆ. ಪಾಕ್ ಜೊತೆಗಿನ ಕ್ರೀಡೆ, ಸಂಗೀತ, ಕಲೆ ಹಾಗೂ ವ್ಯಾಪಾರ ಎಲ್ಲವ ನ್ನೂ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.