ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುವ ಮೂಲಕ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭಗೊಂಡಿದೆ.
ರಾಜವಂಶಸ್ಥರ ನೂತನ ಉತ್ತರಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿರುವ ಯದುವೀರ ಕೃಷ್ಟದತ್ತ ಒಡೆಯರ್ ಅವರಿಗೆ ಇದು ಮೊದಲ ದಸರೆಯಾಗಿದ್ದು, ಚೊಚ್ಚಲ ಖಾಸಗಿ ದರ್ಬಾರ್ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ ಕಳಸ ಪೂಜೆ ಬಳಿಕ ಯದುವೀರ ಅವರು ಪುರೋಹಿತರ ಮಂತ್ರಘೋಷಗಳ ನಡುವೆ ಸಿಂಹಾಸನಕ್ಕೆ ಪೂಜೆ ನೆರವೇರಿಸಿದರು. ಬಳಿಕ ಮೊದಲ ಬಾರಿ ರತ್ನಖಚಿತ ಸಿಂಹಾಸನದಲ್ಲಿ ಯದುವೀರ ವಿರಾಜಮಾನರಾಗುವ ಮೂಲಕ ಖಾಸಗಿ ದರ್ಬಾರ್ ಗೆ ಚಾಲನೆ ನೀಡಿದರು.