ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಮುಂದಾಳತ್ವದ ಎನ್ ಡಿ ಎ ಪಕ್ಷವನ್ನು ಸೋಲಿಸಲು ಆರ್ ಜೆ ಡಿ ಪಕ್ಷದ ಲಾಲು ಪ್ರಸಾದ್ ಯಾದವ್ ಜೊತೆ ಹೊಂದಾಣಿಕೆ ಮಾಡಿಕೊಂಡೆವು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ತಿಳಿಸಿದ್ದಾರೆ.
"ಇಂದಿನ ಪರಿಸ್ಥಿತಿಯನ್ನು ಪರಿಗಣಿಸಿ ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್ ಅವರೊಂದಿಗೆ ಕೈಜೋಡಿಸುವುದು ಅಗತ್ಯವಿತ್ತು" ಎಂದು ಬಿಹಾರದ ಎರಡನೇ ಸುತ್ತಿನ ಚುನಾವಣೆಗಳಿಗೆ ಮಾಡುತ್ತಿರುವ ಪ್ರಚಾರದ ವೇಳೆಯಲ್ಲಿ ನಿತೀಶ್ ಕುಮಾರ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
"ಉತ್ತಮ ಆಡಳಿತ ಮತ್ತು ಅಭಿವೃದ್ಧಿಯಷ್ಟೇ ನಮ್ಮ ಪ್ರಮುಖ ಮಂತ್ರ ಮತ್ತು ಅಧಿಕಾರಕ್ಕೆ ಬಂದ ನಂತರವೂ ಜೆಡಿಯು, ಆರ್ ಜೆ ಡಿ ಮತ್ತು ಕಾಂಗ್ರೆಸ್ ಮೈತ್ರಿ ಮುಂದುವರೆಯಲಿದೆ" ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.