ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ದೆಹಲಿಗೆ ಹೆಚ್ಚಿನ ತ್ವರಿತ ನ್ಯಾಯಾಲಯಗಳ ಅಗತ್ಯವಿದೆ: ಕೇಜ್ರಿವಾಲ್

ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಲು ದೆಹಲಿಗೆ ಹೆಚ್ಚಿನ ತ್ವರಿತ ವಿಚಾರಣೆಯ ನ್ಯಾಯಾಲಯಗಳ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಲು ದೆಹಲಿಗೆ ಹೆಚ್ಚಿನ ತ್ವರಿತ ವಿಚಾರಣೆಯ ನ್ಯಾಯಾಲಯಗಳ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಸೋಮವಾರ ದೆಹಲಿ ಸಂಪುಟ ಸಭೆಯಲ್ಲಿ ತೆಗೆದುಕೊಂದು ನಿರ್ಧಾರಗಳಲ್ಲಿ ಇದು ಒಂದಾಗಿದೆ ಎಂದು ಕೇಜ್ರಿವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ವಿಷಯವನ್ನು ಕುರಿತು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರೊಂದಿಗೆ ಚರ್ಚಿಸಲಾಗುವುದು ಮತ್ತು ಈ ಕೋರ್ಟ್ ಗಳ ಸ್ಥಾಪನೆಗೆ ಎಲ್ಲ ಅಗತ್ಯ ನೆರವನ್ನು ಸರ್ಕಾರ ನೀಡುವುದು ಎಂದು ಅವರು ಹೇಳಿದ್ದಾರೆ.

"ತ್ವರಿತ ವಿಚಾರಣೆಯ ಕೋರ್ಟ್ ಗಳನ್ನು ಸ್ಥಾಪಿಸಲು ಸರ್ಕಾರ ಅನುದಾನ ನೀಡಲು ಸಿದ್ಧವಿದೆ" ಎಂದು ಕೂಡ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಮಹಿಳೆಯರ ವಿರುದ್ಧ ದೌರ್ಜನ್ಯ ಅದರಲ್ಲೂ ರೇಪ್ ಗಳ ಸಂಖ್ಯೆ ಹೆಚ್ಚುತ್ತಿರುವುದು ಏಕೆಂದರೆ ಆರೋಪಿಗಳಿಗೆ ಕಾನೂನಿನ ಬಗ್ಗೆ ಭಯವಿಲ್ಲ ಎಂದು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಹೇಳಿದ್ದರೆ.

"ಎಲ್ಲ ಕೆಟ್ಟ ಜನರು ದೆಹಲಿಯಲ್ಲಿದ್ದಾರೆ ಅಥವಾ ಕೋಲ್ಕತ್ತ, ನ್ಯೂಯಾರ್ಕ್, ಲಂಡನ್ ಅಥವಾ ವಾರಾಣಾಸಿಯಲ್ಲಿ ನೆಲೆಸಿರುವವರೆಲ್ಲ ಸಂತರು ಎಂದಲ್ಲ. ಆದರೆ ದೆಹಲಿಯಲ್ಲಿ ಕಾನೂನಿನ ಬಗ್ಗೆ ಭಯವಿಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಎರಡು ದಿನಗಳ ಹಿಂದೆ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ರೇಪ್ ಹಿನ್ನಲೆಯಲ್ಲಿ, ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಸರ್ಕಾರದಡಿಯಲ್ಲಿ ನೀಡಲು ಕೇಂದ್ರಕ್ಕೆ ಕೇಜ್ರಿವಾಲ್ ಸವಾಲೆಸೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT