ಕೇಂದ್ರ ಸಚಿವ ವಿ.ಕೆ. ಸಿಂಗ್ 
ಪ್ರಧಾನ ಸುದ್ದಿ

ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ದೂರು

ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ...

ಬೆಂಗಳೂರು: ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವ ಕಾಂಗ್ರೆಸ್  ಉಪಾಧ್ಯಕ್ಷ ಆನಂದ್ ಅವರು ದೂರು ನೀಡಿದ್ದು, ಕೇಂದ್ರ ಸಚಿವರಾಗಿರುವ ವಿ.ಕೆ. ಸಿಂಗ್ ಅವರ ಹೇಳಿಕೆ ದಲಿತರನ್ನು ಅವಮಾನಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣ ಹೊರ ರಾಜ್ಯದಲ್ಲಿ ನಡೆದಿರುವ ಕಾರಣ ದೂರು ತೆಗೆದುಕೊಂಡು ಹಿಂಬರಹ ನೀಡಲಾಗಿದೆ ಎಂದು ಹೈ ಗ್ರೌಂಡ್ಸ್ ಪೊಲೀಸರು ತಿಳಿಸಿದ್ದಾರೆ. ಹರಿಯಾಣದಲ್ಲಿ ದಲಿತ ಮಕ್ಕಳ  ಹತ್ಯೆ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ವಿ.ಕೆ.ಸಿಂಗ್, ಎಲ್ಲೋ ನಾಯಿಗೆ ಕಲ್ಲು ಹೊಡೆದರೆ ಕೇಂದ್ರವನ್ನು ದೂಷಿಸುವುದು ಸರಿಯಲ್ಲ. ಇಂತಹ ವಿಚಾರಗಳು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಸಿಂಗ್ ಅವರ ಹೇಳಿಕೆ ರಾಷ್ಟ್ರಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ