ಜಿ.ಪರಮೇಶ್ವರ - ವಿನಯ್ ಕುಲಕರ್ಣಿ 
ಪ್ರಧಾನ ಸುದ್ದಿ

ಪರಮೇಶ್ವರಗೆ ಗೃಹ, ವಿನಯ್ ಕುಲಕರ್ಣಿಗೆ ಅಬಕಾರಿ ಖಾತೆ ನೀಡುವ ಸಾಧ್ಯತೆ

ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆ ಇದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆ ಇದೆ.

ಡಿಸಿಎಂ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದ ಪರಮೇಶ್ವರ ಅವರು, ಗೃಹ ಖಾತೆ ಅಥವಾ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೇಡಿಕೆ ಇಟ್ಟಿದ್ದರು. ಇದೀಗ ಗೃಹ ಸಚಿವರಾಗಿರುವ ಕೆ.ಜೆ.ಜಾರ್ಜ್ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿ, ಅವರ ಬಳಿ ಇರುವ ಗೃಹ ಖಾತೆಯನ್ನು ಪರಮೇಶ್ವರ ಅವರಿಗೆ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಇನ್ನು ಫೆಬ್ರುವರಿ 2016ರವರೆಗೆ ವಿಧಾನ ಪರಿಷತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮುಗಿಯುವವರೆಗೆ ಪರಮೇಶ್ವರ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಇನ್ನುಳಿದಂತೆ ನೂತನ ಸಚಿವರಾಗಿ ಸಿದ್ದರಾಮಯ್ಯ ಸಂಪುಟ ಸೇರುತ್ತಿರುವ ವಿನಯ್ ಕುಲಕರ್ಣಿ ಅವರಿಗೆ ಅಬಕಾರಿ, ಎ.ಮಂಜು ಅವರಿಗೆ ಪ್ರವಾಸೋದ್ಯಮ ಹಾಗೂ ಮನೋಹರ್ ತಹಶಿಲ್ದಾರ್ ಅವರಿಗೆ ಪೌರಾಡಳಿತ ಖಾತೆ ನೀಡುವ ಸಾಧ್ಯತೆ ಇದೆ.

ಈ ನಾಲ್ವರು ಶಾಸಕರು ಇಂದು ಮಧ್ಯಾಹ್ನ 4.30ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ