ಜಿ. ಪರಮೇಶ್ವರ, ಮನೋಹರ್ ತಹಶೀಲ್ದಾರ್, ವಿನಯ್ ಕುಲಕರ್ಣಿ, ಎ ಮಂಜು, 
ಪ್ರಧಾನ ಸುದ್ದಿ

ಪರಮೇಶ್ವರ, ವಿನಯ್, ಮಂಜು, ತಹಶೀಲ್ದಾರ್ ಸಚಿವರಾಗಿ ಪ್ರಮಾಣ

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಧಾರವಾಡ ಶಾಸಕ ವಿನಯ್ ಕುಲಕರ್ಣಿ, ಹಾವೇರಿ ಜೆಲ್ಲಿ ಹಾನಗಲ್ ಶಾಸಕ ಮನೋಹರ್ ತಹಶೀಲ್ದಾರ್ ಹಾಗೂ...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಧಾರವಾಡ ಶಾಸಕ ವಿನಯ್ ಕುಲಕರ್ಣಿ, ಹಾವೇರಿ ಜೆಲ್ಲಿ ಹಾನಗಲ್ ಶಾಸಕ ಮನೋಹರ್ ತಹಶೀಲ್ದಾರ್ ಹಾಗೂ ಅರಕಲಗೂಡು ಶಾಸಕ ಎ. ಮಂಜು ಅವರು ನೂತನ ಸಚಿವರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಸಂಜೆ 4.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನಾಲ್ವರು ಶಾಸಕರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಪರಮೇಶ್ವರ ಹಾಗೂ ಮನೋಹರ್ ತಹಶೀಲ್ದಾರ್ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ರಾಜ್ಯ ಖಾತೆಯ ಸ್ವತಂತ್ರ ಸಚಿವರಾಗಿ ವಿನಯ್ ಕುಲಕರ್ಣಿ ಹಾಗೂ ಎ.ಮಂಜು ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ