ಪ್ರಧಾನ ಸುದ್ದಿ

ಕಲಬುರ್ಗಿ ಹತ್ಯೆ: ಭಜರಂಗದಳ ಮಾಜಿ ಜಿಲ್ಲಾಧ್ಯಕ್ಷ ಪ್ರಸಾದ್ ಅತ್ತಾವರ ಸಿಸಿಬಿ ವಶಕ್ಕೆ

Vishwanath S

ಮಂಗಳೂರು: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಭಜರಂಗದಳದ ಮಾಜಿ ಜಿಲ್ಲಾಧ್ಯಕ್ಷ 38 ವರ್ಷದ ಪ್ರಸಾದ್ ಅತ್ತಾವರ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಲಬುರ್ಗಿ ಹತ್ಯೆಯನ್ನು ಸಮರ್ಥಿಸಿಕೊಂಡು ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ಸಂದೇಶಗಳನ್ನು ಹಾಕಿದ ಆರೋಪದ ಮೇಲೆ ಕಳೆದ ರಾತ್ರಿಯೇ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಲಬುರ್ಗಿ ಹತ್ಯೆಗೂ ಪ್ರಸಾದ್ ಅತ್ತಾವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಸಾದ್ ಅತ್ತಾವರ್ ಮಂಗಳೂರಿನಲ್ಲಿ ನಡೆದ ಪಬ್ ದಾಳಿಯ ಪ್ರಮುಖ ಆರೋಪಿಯಾಗಿದ್ದು, 2010ರಲ್ಲಿ ಅತ್ತಾವರ್ ಒಂದು ವರ್ಷ ಕಾಲ ಜೈಲು ವಾಸ ಅನುಭವಿಸಿದ್ದರು.

2 ವರ್ಷಗಳ ಕಾಲ ಭಜರಂಗದಳದ ಮಂಗಳೂರು ಜಿಲ್ಲಾಧ್ಯಕ್ಷರಾಗಿ ಪ್ರಸಾದ್ ಕಾರ್ಯನಿರ್ವಹಿಸಿದ್ದು, ಶ್ರೀರಾಮಸೇನೆಯ ಮಾಜಿ ರಾಜ್ಯ ಸಂಚಾಲಕನಾಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.

ಧಾರವಾಡದ ಕಲ್ಯಾಣ ನಗರದಲ್ಲಿರುವ ಕಲಬುರ್ಗಿ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ 8.40ರ ಸುಮಾರಿಗೆ ಅಪರಿಚಿತರಿಬ್ಬರು ಎರಡು ಸುತ್ತು ಗುಂಡು ಹಾರಿಸಿ 77 ವರ್ಷದ ಕಲಬುರ್ಗಿಯವರನ್ನು ಹತ್ಯೆ ಮಾಡಿದ್ದರು.

SCROLL FOR NEXT