ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮೇಯರ್ ಚುನಾವಣೆಗೆ "ಹೈ" ಹಸಿರು ನಿಶಾನೆ

ಬಿಬಿಎಂಪಿ ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳಿಗೆ ಇದೇ 11ರಂದು ನಡೆಯಲಿರುವ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ...

ಬೆಂಗಳೂರು: ಬಿಬಿಎಂಪಿ ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳಿಗೆ ಇದೇ 11ರಂದು ನಡೆಯಲಿರುವ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.

ಇದರೊಂದಿಗೆ ಮೇಯರ್ ಚುನಾವಣೆ ಕುರಿತಂತೆ ಮೂಡಿದ್ದ ಗೊಂದಲಗಳಿಗೆ ತೆರೆಬಿದ್ದಿದೆ. ಮೇಯರ್ ಉಪಮೇಯರ್ ಆಯ್ಕೆಯಲ್ಲಿ ಸ್ಥಳೀಯ ಶಾಸಕರು ಮತ್ತು ಸಂಸದರಿಗೆ ಮತ ಚಲಾಯಿಸಲು  ಅವಕಾಶ ಕಲ್ಪಿಸಬಾರದು ಎಂದು ಕೋರಿ ಪಾಲಿಕೆಯ ಬಿಜೆಪಿ ಸದಸ್ಯರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ಏಕ ಸದಸ್ಯ ಪೀಠ  ಚುನಾವಣೆ ನಡೆಸಲು ಅನುಮತಿ ನೀಡಿ ಬುಧವಾರ ಆದೇಶಿಸಿತು.

ಅಂತಿಮ ತೀರ್ಪಿಗೆ ಬದ್ಧವಾಗಿರಿ
ಆದರೆ, ಚುನಾವಣೆಯ ಫಲಿತಾಂಶವು ಈ ಅರ್ಜಿಗಳ ಕುರಿತ ನ್ಯಾಯಾಲಯದ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂದು ನ್ಯಾಯಮೂರ್ತಿಯವರು ಸ್ಪಷ್ಟ ಪಡಿಸಿದರು. ಅಲ್ಲದೆ, ಅಂತಿಮವಾಗಿ ಬಿಬಿಎಂಪಿ ಮೇಯರ್  ಉಪ ಮೇಯರ್ ಚುನಾವಣೆಯಲ್ಲಿ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರು ಮತದಾನ ಮಾಡಲು ಅವಕಾಶವಿಲ್ಲ  ಎಂದು ನ್ಯಾಯಾಲಯ ಆದೇಶ ಹೊರಡಿಸಿದರೆ, ಆಯ್ಕೆಯಾದವರು ಹುದ್ದೆ ಕಳೆದುಕೊಳ್ಳುತ್ತಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.  ಚುನಾವಣೆಯಲ್ಲಿ ಸ್ಥಳೀಯ ಶಾಸಕರು, ಸಂಸದರು ಮತ್ತು  ವಿಧಾನಪರಿಷತ್ ಸದಸ್ಯರಿಗೆ ಮತದಾನ ಅವಕಾಶ ನೀಡುವ ಸಂವಿಧಾನದ ಪರಿಚ್ಛೇದ 243(6) ಮತ್ತು ಕರ್ನಾಟಕ ಮುನ್ಸಿಪಲ್ ಕಾಯ್ದೆಯ ಸೆಕ್ಷನ್ 7 ಮತ್ತು 10ರ ಕಾನೂನುಬದ್ಧತೆ ಪ್ರಶ್ನಿಸಿ  ಬಿಜೆಪಿಯ ಉಮಾವತಿ ಪದ್ಮರಾಜ್ ಸೇರಿ ಐವರು ಕಾರ್ಪೊರೇಟರ್‍ಗಳು ತಕರಾರು ಅರ್ಜಿ ಸಲ್ಲಿಸಿದ್ದರು.

ರಾಜ್ಯ ಸರ್ಕಾರದ ಪರ ಅಡ್ವಕೇಟ್ ಜನರಲ್ ಪ್ರೊ.. ರವಿವರ್ಮ ಕುಮಾರ್ ವಾದಿಸಿ, ಕೆಎಂಸಿ ಕಾಯ್ದೆ ಸೆಕ್ಷನ್ 243(6) ಅನ್ವಯ ನಾಮನಿರ್ದೇಶಿತ ಸದಸ್ಯರಿಗೆ ಮತ ಚಲಾವಣೆಯ ಹಕ್ಕಿದೆ.  ಈಗಾಗಲೇ ಚುನಾವಣೆ ದಿನಾಂಕ ನಿಗದಿಯಾಗಿದೆ. ವೇಳಾಪಟ್ಟಿ ಪ್ರಕಟಗೊಂಡ ಬಳಿಕ ಚುನಾವಣೆ ಪ್ರಕ್ರಿಯೆ ಯಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಬಾರದು. ಅಲ್ಲದೆ ಕೊನೇ ಕ್ಷಣದಲ್ಲಿ ಈ ರೀತಿಯ  ಅರ್ಜಿ ವಿಚಾರಣೆಯಿಂದ ಕೋರ್ಟ್‍ನ ಅಮೂಲ್ಯ ಸಮಯ ವ್ಯರ್ಥವಾಗುತ್ತದೆ. ಹೀಗಾಗಿ ಅರ್ಜಿ ಮಾನ್ಯ ಮಾಡಬಾರದು ಎಂದು ಕೋರಿದರು.

ಪ್ರಜಾತಂತ್ರಕ್ಕೆ ಧಕ್ಕೆ
ಇದಕ್ಕೆ ಆಕ್ಷೇಪಿಸಿದ  ಅರ್ಜಿದಾರರ ಪರ ವಕೀಲರು, ಬಿಬಿಎಂಪಿ ಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಐವರು ಸಂಸದರು, 9 ಮಂದಿ ರಾಜ್ಯಸಭಾ ಸದಸ್ಯರು, 20 ವಿಧಾನ ಪರಿಷತ್ ಸದಸ್ಯರು ಹಾಗೂ 28 ಶಾಸಕರಿಗೆ  ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸಂವಿಧಾನ ಹಾಗೂ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಯ ಸೆಕ್ಷನ್ 9ರ ಅನ್ವಯ ಕಾರ್ಪೊರೇಟ್‍ಗಳಿಂದ ನೇರವಾಗಿ  ಮೇಯರ್ ಆಯ್ಕೆ ಆಗಬೇಕು. ಸದ್ಯ ಶಾಸಕರು ಹಾಗೂ ಸಂಸದರು ಮೇಯರ್ ಯಾರಾಗಬೇಕು ಎಂಬುದನ್ನು ನಿರ್ಣಯಿಸಲಾಗುತ್ತಿದೆ. ಇದು ಸಂವಿಧಾನದ ಆಶಯ ಹಾಗೂ ಪ್ರಜಾತಂತ್ರಕ್ಕೆ ಧಕ್ಕೆ  ತರಲಿದೆ ಎಂದು ವಾದಿಸಿದರು.

ಜಗ್ಗೇಶ್, ವೀರಯ್ಯ ವಿರುದ್ಧ ಕ್ರಮಕ್ಕೆ ಅರ್ಜಿ
ಈ ಮಧ್ಯೆ ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಜಗ್ಗೇಶ್ ಮತ್ತು ಡಿ.ಎಸ್. ವೀರಯ್ಯ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆದಿರುವುದು ಕಾನೂನು ಬಾಹಿರವಾಗಿದ್ದು ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿ ಎಂ. ವೆಂಕಟೇಶ್, ಕೆ.ವಿ.ಪಟೇಲ್ ರಾಜು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video