ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಐದು ವರ್ಷಗಳ ಅವಧಿ ಪೂರೈಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಂಜುನಾಥ್ ರೆಡ್ಡಿ ಅವರು ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನೂತನ ಮೇಯರ್‌ಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಐದು ವರ್ಷ ಮುಂದುವರೆಯಲಿದ್ದು, ಮೈತ್ರಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.
ಇದೇ ವೇಳೆ, ಬಿಬಿಎಂಪಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ ಸಿಎಂ, ಬೆಂಗಳೂರು ಅಭಿವೃದ್ಧಿಗೆ ಸರ್ಕಾರ ಪಣ ತೊಟ್ಟಿದೆ ಮತ್ತು 'ಬ್ರ್ಯಾಂಡ್ ಬೆಂಗಳೂರು' ಖ್ಯಾತಿ ಮುಂದುವರೆಯಲಿದೆ ಎಂದರು.