ಬಿಬಿಎಂಪಿ ಸುತ್ತ ನಿಷೇಧಾಜ್ಞೆ
ಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿಬಿಎಂಪಿ ಕಚೇರಿ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರ ಡಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಆದೇಶಿಸಿದ್ದಾರೆ...
ಬೆಂಗಳೂರು: ಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿಬಿಎಂಪಿ ಕಚೇರಿ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರ ಡಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಆದೇಶಿಸಿದ್ದಾರೆ.
ಚುನಾವಣೆ ವೇಳೆ ಪಕ್ಷಗಳ ಕಾರ್ಯಕರ್ತರು, ಕಿಡಿಗೇಡಿಗಳು ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವ ವೇಳೆ ಗಲಾಟೆಗಳಾಗುವ ಹಾಗೂ ಸಂಚಾರ ವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ.
ಪಟಾಕಿ ಸಿಡಿಸುವುದು, ಮೆರವಣಿಗೆ, ಐದಕ್ಕಿಂತ ಹೆಚ್ಚು ಜನ ಗುಂಪು ಗೂಡುವುದು. ಪ್ರತಿಭಟನೆಗಳನ್ನು ನಿಷೇಧಿಸಲಾಗಿದ್ದು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.