ಕಾವೇರಿ ನದಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನೀರು ಬಿಡೋದಿಲ್ಲ: ತಮಿಳುನಾಡಿಗೆ ರಾಜ್ಯ ಸರ್ಕಾರದ ಖಡಕ್ ಉತ್ತರ

ತಮಿಳುನಾಡು ಸಿಎಂ ಜಯಲಲಿತಾ ಅವರ ಆಗ್ರಹಕ್ಕೆ ಖಡಕ್ ಆಗಿ ಉತ್ತರ ನೀಡಿರುವ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ...

ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಸಿಎಂ ಜಯಲಲಿತಾ ಅವರ ಆಗ್ರಹಕ್ಕೆ ಖಡಕ್ ಆಗಿ ಉತ್ತರ ನೀಡಿರುವ ರಾಜ್ಯ  ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಕರ್ನಾಟಕ ಸರ್ಕಾರ ಬಾಕಿ ಉಳಿಸಿಕೊಂಡಿರುವ 27ಟಿಎಂಸಿ ನೀರನ್ನು ಕೂಡಲೇ ಬಿಡಬೇಕು ಎಂದು ಆಗ್ರಹಿಸಿ ತಮಿಳುನಾಡು ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಹಿಂದೆ  ಪತ್ರವೊಂದನ್ನು ಬರೆದಿತ್ತು. ಇದಕ್ಕೆ ಉತ್ತರಿಸಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಪ್ರಸ್ತುತ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು  ಹೇಳಿದೆ.

ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರಿಗೆ ಪತ್ರವೊಂದನ್ನು ಬರೆದಿರುವ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು, ಒಪ್ಪಂದದಂತೆ ತಮಿಳುನಾಡಿಗೆ  ಬಿಡಬೇಕಾದಷ್ಟು ನೀರನ್ನು ಬಿಟ್ಟಿದ್ದೇವೆ. ಆದರೆ ಈ ಬಾರಿ ಕರ್ನಾಟಕದಲ್ಲೂ ಮಳೆ ಅಭಾವ, ಬರಗಾಲ. ರಾಜ್ಯದ ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ತಮಿಳುನಾಡಿಗೆ  ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ.

ಈ ಹಿಂದೆ ಕರ್ನಾಟಕ ಬಾಕಿ 27ಟಿಎಂಸಿ ಕಾವೇರಿ ನೀರು ಬಿಡಬೇಕೆಂದು ಆಗ್ರಹಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು  ಮಧ್ಯಪ್ರವೇಶಿಸಬೇಕೆಂದು ಪತ್ರ ಬರೆದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!