ನವದೆಹಲಿ: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ನಾಲ್ವರು ಆರೋಪಿಗಳ ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಬುಧವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಮಧ್ಯಾಹ್ನ ಅರ್ಜಿ ವಿಚಾರಣೆಗೆ ಬರಲಿದೆ.
ಪ್ರಕರಣದ ಆರೋಪಿಗಳಾದ ಲೋಕಾಯುಕ್ತ ಮಾಜಿ ಪಿಆರ್‌ಒ ಸೈಯದ್ ರಿಯಾಜ್, ಅಶೋಕ್ ಕುಮಾರ್, ಶಂಕರೇಗೌಡ ಹಾಗೂ ಶ್ರೀನಿವಾಸಗೌಡ ಅವರಿಗೆ ಹೈಕೋರ್ಟ್ ಇಂದಿನಿಂದ ಜಾರಿಗೆ ಬರುವಂತೆ ಜಾಮೀನು ಮಂಜೂರು ಮಾಡಿತ್ತು. ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.
ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಸುಪ್ರೀಂ ಪೀಠ ಇಂದು ಮಧ್ಯಾಹ್ನ ಎಸ್‌ಐಟಿ ಮೇಲ್ಮನವಿಯ ವಿಚಾರಣೆ ನಡೆಸಲಿದೆ.