ನವದೆಹಲಿ: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ವಿಧಿಸಿದೆ.
ಆರೋಪಿಗಳಾದ ಲೋಕಾಯುಕ್ತ ಮಾಜಿ ಪಿಆರ್‌ಒ ಸೈಯದ್ ರಿಯಾಜ್, ಅಶೋಕ್ ಕುಮಾರ್, ಶಂಕರೇಗೌಡ ಹಾಗೂ ಶ್ರೀನಿವಾಸಗೌಡ ಅವರಿಗೆ ಹೈಕೋರ್ಟ್ ಇಂದಿನಿಂದ ಜಾರಿಗೆ ಬರುವಂತೆ ಜಾಮೀನು ಮಂಜೂರು ಮಾಡಿತ್ತು. ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಸುಪ್ರೀಂ ಪೀಠ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಆರೋಪಿಗಳನ್ನು ಬಿಡುಗಡೆ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ ಈ ಕುರಿತು ಕೂಡಲೇ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿದ್ದಾರೆ.