ಗೋವಿಂದ ಪನ್ಸರೆ ಹತ್ಯೆ ಪ್ರಕರಣದ ಶಂಕಿತ ಆರೋಪಿ ಸಮೀರ್ ವಿಷ್ಣು ಗಾಯಕ್ವಾಡ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಗೋವಿಂದ ಪನ್ಸರೆ ಹತ್ಯೆ: ಸಂಕೇಶ್ವರದಲ್ಲಿ ಮತ್ತಿಬ್ಬರ ಬಂಧನ

ಮಹಾರಾಷ್ಟ್ರದ ವಿಚಾರವಾದಿ ಗೋವಿಂದ ಪನ್ಸರೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಸಿಬ್ಬಂದಿ ಗುರುವಾರ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದೆ...

ಬೆಳಗಾವಿ: ಮಹಾರಾಷ್ಟ್ರದ ವಿಚಾರವಾದಿ ಗೋವಿಂದ ಪನ್ಸರೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಸಿಬ್ಬಂದಿ ಗುರುವಾರ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದೆ.

ಗೋವಿಂದ ಪನ್ಸರೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ವಿಶೇಷ ತನಿಖಾದಳದ ಅಧಿಕಾರಿಗಳು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದಲ್ಲಿ  ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸಮೀರ್ ವಿಷ್ಟು ಗಾಯಕ್ವಾಡ್ ನೀಡಿರುವ ಮಾಹಿತಿ ಮೇರೆಗೆ ಸಂಕೇಶ್ವರದ ನಿವಾಸಿಗಳಾದ ಶ್ರೀಧರ್ ಜಾದವ್ (21) ಮತ್ತು ಸತೀಶ್ ಜಾದವ್ (23) ಎಂಬುವವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಗೋವಿಂದ ಪನ್ಸರೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಂತಾಗಿದೆ.

ವೀಕ್ಷಣೆಯಲ್ಲಿ "ಸನಾತನ ಸಂಸ್ಥಾ"
ಇನ್ನು ಗೋವಿಂಗ್ ಪನ್ಸರೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿ ಬಂಧಿತನಾಗಿರುವ ಸಮೀರ್ ವಿಷ್ಟು ಗಾಯಕ್ವಾಡ್ ಸನಾತನ ಸಂಸ್ಥೆಯ ಕಾರ್ಯಕರ್ತನಾಗಿದ್ದು, ಈ ಸಂಸ್ಥೆಯನ್ನು ತನಿಖಾಧಿಕಾರಿಗಳು ವೀಕ್ಷಣೆಯಲ್ಲಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಮೀರ್ ಗಾಯಕ್ವಾಡ್ ನ ದೂರವಾಣಿ ಕರೆಗಳ ಮಾಹಿತಿ ಪಡೆದಿರುವ ಅಧಿಕಾರಿಗಳು ಸನಾತನ ಸಂಸ್ಥೆಯ ವಿರುದ್ಧವೂ ತನಿಖೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!

ಹಬ್ಬದ ಸಂಭ್ರಮದ ನಡುವೆ ದುರಂತ; ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!