ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಝೀ ಮೀಡಿಯಾ ಗ್ರೂಪ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎಗೆ ಶೇ.50.8ರಷ್ಟು ಹಾಗೂ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಮಹಾ ಮೈತ್ರಿಗೆ ಶೇ.42.5ರಷ್ಟು ಮತಗಳು ದೊರೆತರೆ, ಶೇ.6.7ರಷ್ಟು ಮತಗಳನ್ನು ಇತರರು ಪಡೆಯಲಿದ್ದಾರೆ.
ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ 140 ಸ್ಥಾನಗಳಲ್ಲಿ ಹಾಗೂ ಮಹಾ ಮೈತ್ರಿ 70 ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ. ಇನ್ನು 33 ಸ್ಥಾನಗಳಲ್ಲಿ ನೇರ ಹಣಾಹಣಿ ನಡೆಯಲಿದ್ದು, ಯಾರು ಗೆಲ್ಲುತ್ತಾರೆ ಅಂತ ಹೇಳುವುದು ಕಷ್ಟ ಎಂದಿದ್ದಾರೆ ಮತದಾರ.
ಈ ಬಾರಿ ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಶೇ.41.2ರಷ್ಟು ಅಲ್ಪಸಂಖ್ಯಾತ ಮತಗಳನ್ನು ಸೆಳೆಯಲಿದ್ದು, ಮಹಾ ಮೈತ್ರಿ ಶೇ.52.4ರಷ್ಟು ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.
ಐದು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಮೊದಲ ಹಂತ ಹಾಗೂ ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ನವೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.