ಎಚ್.ಡಿ.ಕುಮಾರಸ್ವಾಮಿ 
ಪ್ರಧಾನ ಸುದ್ದಿ

ಸಚಿವ ದೇಶಪಾಂಡೆ ಸೇರಿ 50 ಪ್ರಭಾವಿಗಳಿಂದ 177 ಎಕರೆ ಅರಣ್ಯ ಭೂಮಿ ಒತ್ತುವರಿ: ಎಚ್‌ಡಿಕೆ

ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಒಟ್ಟು 50 ಪ್ರಭಾವಿ ನಾಯಕರು ಸುಮಾರು 177 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು...

ಬೆಂಗಳೂರು: ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಒಟ್ಟು 50 ಪ್ರಭಾವಿ ನಾಯಕರು ಸುಮಾರು 177 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಆರೋಪಿಸಿದ್ದಾರೆ.

ಈ ಕುರಿತು ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಾಖಲೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಎಚ್‌ಡಿಕೆ, ಸಚಿವ ಆರ್.ವಿ.ದೇಶಪಾಂಡೆ, ಶೋಭಾ ಡವಲಪರ್ಸ್ ಮಂತ್ರಿ ಡವಲಪರ್ಸ್ ಹಾಗೂ ಕೆಲವು ಅಧಿಕಾರಿಗಳು ಸೇರಿದಂತೆ 50ಕ್ಕೂ ಹೆಚ್ಚು ಪ್ರಭಾವಿಗಳು ಜಕ್ಕೂರು ಅಳ್ಳಾಲಸಂದ್ರದಲ್ಲಿ ಸುಮಾರಿ 14 ಸಾವಿರ ಕೋಟಿ ಮೌಲ್ಯದ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಜಮೀನು ಹಿಂಪಡೆಯಲಿ. ಇಲ್ಲದಿದ್ದರೆ ಸಿಎಂ ಭೂಗಳ್ಳರ ಭಾಗ್ಯ ಪ್ರಕಟಿಸಲಿ ಎಂದು ಕುಮಾಸ್ವಾಮಿ ಸವಾಲು ಹಾಕಿದರು. ಅಲ್ಲದೆ ಭೂಗಳ್ಳರ ವಿರುದ್ಧ ಹೋರಾಟಕ್ಕೆ ಕೈಜೋಡಿಸುವಂತೆ ಕನ್ನಡಪರ ಸಂಘಟನೆಗಳಿಗೆ ಹಾಗೂ ಇತರೆ ಸಂಘ ಸಂಸ್ಥೆಗಳಿಗೆ ಪತ್ರ ಬರೆಯುವುದಾಗಿ ಮಾಜಿ ಸಿಎಂ ತಿಳಿಸಿದರು.

ಇದೇ ವೇಳೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎಚ್‌ಡಿಕೆ, ಅಧಿವೇಶನದಲ್ಲಿ ಇಂಥ ವಿಷಯ ಮಂಡನೆಗೆ ಸ್ಪೀಕರ್ ಅವಕಾಶ ನೀಡಲಿಲ್ಲ. ಹೀಗಾಗಿ ಇದನ್ನೆಲ್ಲ ಸುದ್ದಿಗೋಷ್ಠಿಯಲ್ಲಿ ಹೇಳಬೇಕಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ, ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ

'ಡಿಂಪಲ್ ಕ್ವೀನ್' ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ: ರಚಿತಾ ರಾಮ್ ಸಿನಿಪಯಣಕ್ಕೆ ಶುಭಾಶಯಗಳ ಮಹಾಪೂರ!

‘ರಾಜಿ ಮಾಡಿಕೊಂಡ ಪ್ರಧಾನಿ ದೇಶ ನಡೆಸಲು ಅಸಮರ್ಥ’: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

SCROLL FOR NEXT