ಮೃತ ದೇಹಗಳ ಮಧ್ಯೆ ನಡೆದು ಹೋಗುತ್ತಿರುವ ಯಾತ್ರಿಕ 
ಪ್ರಧಾನ ಸುದ್ದಿ

ಹಜ್ ಯಾತ್ರೆ ವೇಳೆ ಕಾಲ್ತುಳಿತ, ಸಾವಿನ ಸಂಖ್ಯೆ 717ಕ್ಕೆ ಏರಿಕೆ

ಸೌದಿ ಅರೇಬಿಯಾದಲ್ಲಿರುವ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದ ಮಸೀದಿ ಬಳಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವ...

ದುಬೈ: ಸೌದಿ ಅರೇಬಿಯಾದಲ್ಲಿರುವ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದ ಮಸೀದಿ ಬಳಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 700ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆ ಇದೆ.

ಬಕ್ರೀದ್ ಹಬ್ಬದ ಪ್ರಾರ್ಥನೆ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ದುರಂತದಲ್ಲಿ 717 ಮಂದಿ ಮೃತಪಟ್ಟಿದ್ದಾರೆ ಮತ್ತು 863 ಯಾತ್ರಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾ ನಾಗರಿಕ ರಕ್ಷಣಾ ನಿರ್ದೇಶನಾಲಯ ತಿಳಿಸಿದೆ.

ಮೆಕ್ಕಾದಿಂದ ಸುಮಾರು 5 ಕಿ.ಮೀ.ದೂರದಲ್ಲಿರುವ ಮೀನಾದಲ್ಲಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಪರಸ್ಥಿತಿ ನಿಯಂತ್ರಣದಲ್ಲಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆಕ್ಕಾದಲ್ಲಿ ಕಳೆದ 15 ದಿನಗಳಲ್ಲಿ ಸಂಭವಿಸಿದ ಎರಡನೇ ಭೀಕರ ದುರಂತ ಇದಾಗಿದ್ದು, ಸೆಪ್ಟೆಂಬರ್ 12ರಂದು ಕ್ರೇನ್ ಕುಸಿದು 107 ಮಂದಿ ಮೃತಪಟ್ಟಿದ್ದರು. ಈಗ ಬಕ್ರೀದ್ ಮುನ್ನಾ ದಿನ ಮತ್ತೊಂದು ದುರಂತ ಸಂಭವಿಸಿದೆ.

ರಾಜ್ಯದಿಂದ  6 ಸಾವಿರ ಮಂದಿ ಹಜ್ ಯಾತ್ರೆಗೆ
ಈ ಬಾರಿ ಕರ್ನಾಟಕದಿಂದ ಸುಮಾರು 6.400 ಮಂದಿ ಹಜ್ ಯಾತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಸೇರಿದಂತೆ ಭಾರತದಿಂದ ಸುಮಾರು 1,20,000 ಮಂದಿ ಹಜ್ ಯಾತ್ರೆಗೆ ತೆರಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ