ಪ್ರಧಾನ ಸುದ್ದಿ

ರಾಘವೇಶ್ವರ ಶ್ರೀ ರೇಪ್ ಕೇಸ್: ಸಿಐಡಿಯಿಂದ ಇಂದು ಚಾರ್ಜ್‌ಶೀಟ್ ಸಲ್ಲಿಕೆ

Lingaraj Badiger

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಶನಿವಾರ ಚಾರ್ಜ್‌ಶೀಟ್ ಸಲ್ಲಿಸುವುದಾಗಿ ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರು ಶುಕ್ರವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ತಾನೂನು ತಜ್ಞರಿಂದ ಗ್ರೀನ್ ಸಿಗ್ನಲ್ ಪಡೆದಿರುವ ಸಿಐಡಿ ನಾಳೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಲಿದೆ.

ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಅವರು ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಸಿಐಡಿ ಈಗ 680 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ.

ಆರೋಪ ಪಟ್ಟಿಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಮಾಹಿತಿ ಕೂಡ ಸೇರಿದ್ದು, ಡಿಎನ್ಎ ಪರೀಕ್ಷೆಯಲ್ಲಿ ಅತ್ಯಾಚಾರ ನಡೆಸಿದ್ದಕ್ಕೆ ಸಾಕ್ಷ್ಯ ಲಭ್ಯವಾಗಿದೆ. ಅಷ್ಟೇ ಅಲ್ಲದೆ  ರಾಮಕಥಾ ಗಾಯಕಿ ಪ್ರೇಮಲತಾ ಬಟ್ಟೆ ಮೇಲಿದ್ದ ವೀರ್ಯ ಶ್ರೀಗಳದ್ದೆಂದೇ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿರುವುದಾಗಿ ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

SCROLL FOR NEXT