ರಾಜ್ಯಪಾಲ ವಜುಭಾಯಿ ವಾಲಾ ಮತ್ತು ರಾಘವೇಶ್ವರ ಶ್ರೀ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ರಾಘವೇಶ್ವರ ಶ್ರೀ ಪ್ರಕರಣ ತನಿಖೆ ವಿಳಂಬಕ್ಕೆ ರಾಜ್ಯಪಾಲರ ಅತೃಪ್ತಿ..!

ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ರಾಮಚಂದ್ರಾ ಪುರ ಮಠದ ರಾಘವೇಶ್ವರ ಶ್ರೀಗಳ ಪ್ರಕರಣದ ತನಿಖೆ...

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ರಾಮಚಂದ್ರಾ ಪುರ ಮಠದ ರಾಘವೇಶ್ವರ ಶ್ರೀಗಳ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದೇಕೆ ಎಂದು ರಾಜ್ಯಪಾಲರು ಸರ್ಕಾರದಿಂದ ಮಾಹಿತಿ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಜುಭಾಯಿ ವಾಲ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರದ ಆರೋಪದ ತನಿಖೆಯ ರೀತಿ ನೀತಿಯ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸಬೇಕೆಂದು ತಾಕೀತು ಮಾಡಿದ್ದಾರೆ. ಆ ಮೂಲಕ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ರಾಘವೇಶ್ವರ ಶ್ರೀಗಳ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಿರುವುದು ತೀವ್ರ ಸಂಚಲನ ಉಂಟುಮಾಡಿದೆ.

ಈ ಹಿಂದೆಯೂ ಕೂಡ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಕುಮಾರ ಮಂಗಳಂ ಅವರು ರಾಘವೇಶ್ವರ ಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವಿಳಂಬವಾಗುತ್ತಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮತ್ತು ರಾಜ್ಯಪಾಲರಿಗೆ ಪತ್ರ ಬರೆದು, ಸ್ವತಃ ಅವರೇ ರಾಜ್ಯಪಾಲರನ್ನು ಕಂಡು ಈ ಬಗ್ಗೆ ಅವರ ಗಮನ ಸೆಳೆದಿದ್ದರು. ಬಳಿಕ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಪಾಲರು ಕೂಡಲೇ ಕಾರ್ಯೋನ್ಮುಖರಾಗಿ ಸರ್ಕಾರದಿಂದ ಮಾಹಿತಿ ಪಡೆಯಲು ಮುಂದಾಗಿದ್ದಾರೆ. `ತನಿಖೆ ವಿಳಂಬವಾಗಲು ಕಾರಣವೇನು? ಮಹಿಳಾ ದೌರ್ಜನ್ಯದ ವಿಚಾರದಲ್ಲಿ ನಿರ್ಲಕ್ಷ್ಯವೇಕೆ? ದೇಶಾದ್ಯಂತ ಈ ಪ್ರಕರಣ ಮಾರ್ದನಿಗೊಳ್ಳುತ್ತಿದ್ದರೂ ತನಿಖೆಗೆ ವಿಳಂಬ ರೋಗ ತಟ್ಟಿರುವುದು ಅರ್ಥವಾಗದ ಸಂಗತಿ` ಎಂದು ಕಿಡಿ ಕಾರಿದ್ದಾರೆ.

ರಾಜಕೀಯ ಒತ್ತಡಕ್ಕೆ ಮಣಿಯುತ್ತಿರುವ ಸರ್ಕಾರ...?
ಇದೇ ವೇಳೆ ರಾಘವೇಶ್ವರ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣದ ತನಿಖೆಯನ್ನು ವಿಳಂಬ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಶ್ರೀಗಳ ವಿರುದ್ಧ ತನಿಖೆದೆ ಮುಂದಾದರೆ ಸಮಾಜದ ಒಂದು ಸಮುದಾಯ ಮತ್ತು ಅವರ ಹಿಂಬಾಲಿಸುವ ರಾಜಕೀಯ ನಾಯಕರು ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂಬ ಭಯದಿಂದಾಗಿ ಸರ್ಕಾರ ತನಿಖೆಯನ್ನು ವಿಳಂಬ ಮಾಡುತ್ತಿದೆ ಎಂಬ ವಾದ ಮತ್ತೊಂದೆಡೆಯಿಂದ ಕೇಳಿಬರುತ್ತಿದೆ.

ಆರೋಪ ತಿರಸ್ಕರಿಸಿದ ಸರ್ಕಾರ

ಇನ್ನು ರಾಜ್ಯಪಾಲರ ಈ ದಿಢೀರ್ ಪ್ರತಿಕಕ್ರಿಯೆಯಿಂದಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ತನ್ನ ವಿರುದ್ಧ ಎಲ್ಲ ಆರೋಪಗಳನ್ನು ತಳ್ಳಿಹಾಕಿದೆ. ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದಾರೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT