ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಈ ತಿಂಗಳಲ್ಲೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ಈ ತಿಂಗಳು ಅಂತ್ಯದೊಳಗೆ ರಾಜ್ಯ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: ಈ ತಿಂಗಳು ಅಂತ್ಯದೊಳಗೆ ರಾಜ್ಯ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು. ಅಲ್ಲದೆ ಸಂಪುಟದಿಂದ ಯಾರನ್ನು ಕೈಬಿಡಬೇಕು, ಯಾರನ್ನು ಸಂಪುಟಕ್ಕೆ ಸೇರಿಸಬೇಕು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದರು.
ಇದೇ ವೇಳೆ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈಗಾಗಲೇ ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿಗಳು ಯಾರೇ ಇರಲಿ .ಅಧಿಕಾರಿಗಳು ಇರಲಿ, ರಾಜಕಾರಣಿಗಳೆ ಇರಲಿ ಅವರ ವಿರುದ್ಧ ಕಾನೂನಿನನ್ವಯ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಜಿಲ್ಲಾ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡುವ ಸಂದರ್ಭದಲ್ಲಿ ಬಜೆಟ್ ನಂತರ ಸಂಪುಟ ಪುನಾರಚಿಸುವ ಪ್ರಸ್ತಾವನ್ನು ಸಿಎಂ ಮುಂದಿಟ್ಟದ್ದರು. ಇದಕ್ಕೆ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ್ದ ಹೈಕಮಾಂಡ್, ಬಜೆಟ್ ಅಧಿವೇಶನದ ನಂತರ ದೆಹಲಿಗೆ ಬರುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಈಗ ಸಂಪುಟ ಪನಾರಚನೆಗೆ ಮುಂದಾಗಿರುವ ಸಿದ್ದರಾಮಯ್ಯ ಅನುಭವಿಗಳು ಹಾಗೂ ಪರಿಣಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಸಮರ್ಥ ತಂಡ ಕಟ್ಟಿಕೊಳ್ಳಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!