ಕಳಸಾ-ಬಂಡೂರಿ ಮತ್ತು ಮಹಾದಾಯಿ ವಿವಾದ ಕುರಿತು ಸರ್ವಪಕ್ಷ ಸಭೆಯಲ್ಲಿ ಚರ್ಚೆ ನಡೆಸಲಾಯಿತು. 
ಪ್ರಧಾನ ಸುದ್ದಿ

ಕಳಸಾ ಬಂಡೂರಿ ವಿವಾದ: ಪ್ರಧಾನಿ ಭೇಟಿಗೆ ಸರ್ವಪಕ್ಷಗಳ ನಿಯೋಗ ತೀರ್ಮಾನ

ಕಳಸಾ -ಬಂಡೂರಿ ಮತ್ತು ಮಹಾದಾಯಿ ವಿವಾದ ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ...

ಬೆಂಗಳೂರು: ಕಳಸಾ -ಬಂಡೂರಿ ಮತ್ತು ಮಹಾದಾಯಿ ವಿವಾದ ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸರ್ವಪಕ್ಷಗಳ ನಿಯೋಗ ನಿರ್ಧರಿಸಿದೆ.
ಕಳಸಾ ಬಂಡೂರಿ ವಿವಾದ ಕುರಿತು ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ಒಮ್ಮತ ಮೂಡದಿದ್ದರೂ, ರೈತರ ಹಿತದೃಷ್ಟಿಯಿಂದ ಮತ್ತೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. 
ಆದರೆ, ನಿಯೋಗ ತೆರಳುವುದಕ್ಕೂ ಮೊದಲು ವಿಧಾನಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಹಾಗೂ ಶನಿವಾರ ನಡೆದ ಸಭೆಯಲ್ಲಿನ ತೀರ್ಮಾನಗಳನ್ನು ಆಧರಿಸಿ ಪ್ರಧಾನಿಗೆ ಪತ್ರ ಬರೆಯಲಾಗುವುದು. ನಂತರ ದಿನಾಂಕ ನಿಗದಿಪಡಿಸಿಕೊಂಡು ಸರ್ವಪಕ್ಷ ನಿಯೋಗ ದೆಹಲಿ ತೆರಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 
ಮಹಾದಾಯಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೇಲೆ ಒತ್ತಡ ತರಲು ವಿಧಾನ ಸಭೆಯಲ್ಲಿ ಸರ್ವಾನುಮತದ ಅಂಗೀಕಾರ ಆಗಿದೆ. ಇದರಿಂದ ಹಿಂದೆ ಸರಿಯಲು ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 
ಇನ್ನು ನಿನ್ನೆ ನಡೆದ ಮಹಾದಾಯಿ ವಿವಾದ ಬಗೆಹರಿಸುವ ಸಂಬಂಧ ರಾಜ್ಯ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆ ವಿಫಲವಾಯಿತು. ಸಭೆಯಲ್ಲಿ ಉಭಯ ಸದನಗಳ ಪ್ರತಿಪಕ್ಷಗಳ ನಾಯಕರು, ಕೇಂದ್ರ ಸಚಿವರು, ಸಂಸದರು, ಉತ್ತರ ಕರ್ನಾಟಕದ ಶಾಸಕರು ಮತ್ತು ರೈತ ಮುಖಂಡರ ಸಭೆ ಕರೆಯಲಾಗಿತ್ತು. ಸುಮಾರು ಮೂರು ತಾಸು ನಡೆದ ಸಭೆಯಲ್ಲಿ ಎರಡೂ ಪಕ್ಷಗಳ ನಾಯಕರ ನಡುವೆ ಒಮ್ಮತ ಮೂಡಲಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT