ಪ್ರತಿಭಟನಾನಿರತ ಉಪನ್ಯಾಸಕರು 
ಪ್ರಧಾನ ಸುದ್ದಿ

ಪಿಯು ಉಪನಾಸ್ಯಕರ ವೇತನ, ಭತ್ಯೆ ಶೇ. 30ರಷ್ಟು ಹೆಚ್ಚಳ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಗೊಂದಲದ ನಡುವೆಯೇ ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ...

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಗೊಂದಲದ ನಡುವೆಯೇ ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಮೌಲ್ಯಮಾಪನ ಬಹಿಷ್ಕರಿಸಿರುವ ಪಿಯು ಉಪನ್ಯಾಸಕರ ವೇತನ ಮತ್ತು ಭತ್ಯೆಯನ್ನು ಶೇ,30ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಮೌಲ್ಯ ಮಾಪನದಲ್ಲಿ ಪಾಲ್ಗೊಳ್ಳುವ ಉಪನ್ಯಾಸಕರ ದಿನಭತ್ಯೆ ಮತ್ತು ವೇತನವನ್ನು ಶೇ 30ರಷ್ಟು ಹೆಚ್ಚಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತ ರಾಮೇಗೌಡ ಅವರು ತಿಳಿಸಿದ್ದಾರೆ. 
ಉಪನ್ಯಾಸಕರ ದಿನಭತ್ಯೆ ಮತ್ತು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ರಾಮೇಗೌಡ ಅವರು, ಮೌಲ್ಯ ಮಾಪನದಲ್ಲಿ ಪಾಲ್ಗೊಳ್ಳುವವರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಕಳೆದ ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪಿಯು ಉಪನ್ಯಾಸಕರ ಸಂಘದ ಪದಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಅಂದೇ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದರು.
ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಫ್ರೀಡಂಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದು ರಾಜ್ಯದ ನಾನಾ ಜಿಲ್ಲೆಗಳಿಂದ ನೂರಾರು ಉಪನ್ಯಾಸಕರು ನಗರದ ಬೆಂಗಳೂರಿಗೆ ಆಗಮಿಸಿ ಧರಣಿಗೆ ಬೆಂಬಲ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!