ಪಿಯು ಬೋರ್ಡ್ 
ಪ್ರಧಾನ ಸುದ್ದಿ

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಐಡಿಯಿಂದ ಮತ್ತಿಬ್ಬರ ಬಂಧನ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ,...

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ಬುಧವಾರ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಪೂರ್ಣಪ್ರಜ್ಞ ಪಿಯು ಕಾಲೇಜ್ ನ ದೈಹಿಕ ಶಿಕ್ಷಕ, ಮಲ್ಲೇಶ್ವರಂ ನಿವಾಸಿ ಅನಿಲ್ ಹಾಗೂ ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ಸತೀಶ್ ನನ್ನು ಇಂದು ಸಿಐಡಿ ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ.
ಪ್ರಶ್ನೆ ಪತ್ರಿಕೆ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅನಿಲ್ ಹಾಗೂ ಸತೀಶ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಸಚಿವರೊಬ್ಬರ ವಿಶೇಷ ಅಧಿಕಾರಿ ಸೇರಿದಂತೆ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದ ಸಿಐಡಿ ಈಗ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದೆ. 
ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿದ್ದು, ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿದೆ, ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಗುಬ್ಬಿ ತಾಲ್ಲೂಕಿನ ಕಾಗೇರಿಯ ಶಿವಕುಮಾರ್ ಅಲಿಯಾಸ್ ಶಿವಕುಮಾರಸ್ವಾಮಿ ಪ್ರಮುಖ ಪಾತ್ರವಹಿಸಿರುವುದು ಪತ್ತೆಯಾಗಿದೆ. ಹಲವು ವರ್ಷಗಳಿಂದ ದಂಧೆ ನಡೆಸುತ್ತಿರುವ ಈತ ಮೊದಲು ಉಪನ್ಯಾಸಕನಾಗಿರುವುದು ಗೊತ್ತಾಗಿದ್ದು ಈಗ ತಲೆ ಮರೆಸಿಕೊಂಡಿರುವ ಆತನಿಗಾಗಿ ಸಿಐಡಿ ತೀವ್ರ ಶೋಧ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!