ವಿಧಾನಸೌಧ 
ಪ್ರಧಾನ ಸುದ್ದಿ

ಶಕ್ತಿ ಕೇಂದ್ರ ವಿಧಾನಸೌಧದಲ್ಲೇ ಕಳ್ಳತನ, ರಹಸ್ಯ ಕಡತಗಳನ್ನೇ ಕದ್ದೊಯ್ದರು!

ಶಕ್ತಿ ಕೇಂದ್ರ ವಿಧಾನಸೌಧದಲ್ಲೇ ಕಳ್ಳತನವಾಗಿದ್ದು, ಮಹತ್ವದ ದಾಖಲೆಗಳನ್ನೇ ಕಳ್ಳರು ಕದ್ದೊಯ್ದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ಶಕ್ತಿ ಕೇಂದ್ರ ವಿಧಾನಸೌಧದಲ್ಲೇ ಕಳ್ಳತನವಾಗಿದ್ದು, ಮಹತ್ವದ ದಾಖಲೆಗಳನ್ನೇ ಕಳ್ಳರು ಕದ್ದೊಯ್ದ ಘಟನೆ ಭಾನುವಾರ ನಡೆದಿದೆ.
ವಿಧಾನ ಪರಿಷತ್ ಸಚಿವಾಲಯದ ಆಡಳಿತ ಶಾಖೆ ಕಚೇರಿಯಲ್ಲಿರುವ 159ನೇ ಕೊಠಡಿಯ ಬೀಗ ಮುರಿದು ರಹಸ್ಯ ಕಡತಗಳ ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಚಿವಾಲಯದಲ್ಲಿದ್ದ ಮಹತ್ವದ ದಾಖಲೆಗಳನ್ನು ಕಳವು ಮಾಡಿದ್ದು, ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪರಿಷತ್ ಸಚಿವಾಲಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
'ನನ್ನ ಕೊಠಡಿಯ ಬೀಗ ಮುರಿದು ಮಹತ್ವದ ದಾಖಲೆ ಕಳವು ಮಾಡಿದ್ದಾರೆ. ಯಾವ ಕಡತಗಳು ನಾಪತ್ತೆಯಾಗಿವೆ ಎಂಬುದು ತಿಳಿದು ಬಂದಿಲ್ಲ. ಯಾರು ಕಳ್ಳತನ ಮಾಡಿದ್ದಾರೆಂಬುದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ದೂರು ನೀಡಿರುವುದಾಗಿ' ಪರಿಷತ್ ಅಧೀನ ಕಾರ್ಯದರ್ಶಿ ಕೆ.ಸಿ.ಪ್ರಭು ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ