ಪವನ್ ಕಲ್ಯಾಣ್ 
ಪ್ರಧಾನ ಸುದ್ದಿ

ಶಾಸಕರ ಅತಿಕ್ರಮ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿ

ಕಾಪು ಮೀಸಲಾತಿ ಹಾಗೂ ಅಮರಾವತಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿರುವ....

ಹೈದರಾಬಾದ್: ಕಾಪು ಮೀಸಲಾತಿ ಹಾಗೂ ಅಮರಾವತಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ವಿರುದ್ಧ ಟಾಲಿವುಡ್ ನಟ ಹಾಗೂ ಜನ ಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ಶಾಸಕರು ಟಿಡಿಪಿ ಸೇರುತ್ತಿರುವುದನ್ನು ಬಲವಾಗಿ ಖಂಡಿಸಿರುವ ಪವನ್ ಕಲ್ಯಾಣ್, ಸ್ವತಃ ಚಂದ್ರಬಾಬು ನಾಯ್ಡು ಅವರೇ ಅತಿ ಉತ್ಸಾಹದಿಂದ ಪ್ರತಿಪಕ್ಷದ ಶಾಸಕರನ್ನು ಬಲವಂತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಶಾಸಕರ ಅತಿಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟಿವಿ ಸಂದರ್ಶನವೊಂದರಲ್ಲಿ ಟಾಲಿವುಡ್ ನಟ ಹೇಳಿದ್ದಾರೆ.
ನಿಷ್ಠೆ ಬದಲಿಸಿ ಪಕ್ಷಾಂತರ ಮಾಡುವವರನ್ನು ನಾನು ಯಾವತ್ತೂ ಬೆಂಬಲಿಸುವುದಿಲ್ಲ ಎಂದಿರುವ ಪವನ್ ಕಲ್ಯಾಣ್, ಬಹುಪಕ್ಷ ಪದ್ದತಿ ಪ್ರಜಾಪ್ರಭುತ್ವದ ಪ್ರಮುಖ ಅಂಗ. ಹೀಗಾಗಿಯೇ ನಾನು ಜನಸೇನಾ ರಾಜಕೀಯ ಪಕ್ಷವನ್ನು ಕಟ್ಟಿದ್ದೇನೆ. 2019ರ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಒಂದು ಪಕ್ಷದಿಂದ ಜನರ ಸಮಸ್ಯೆಗಳು ಪರಿಹಾರವಾಗದಿದ್ದರೆ ಮತ್ತೊಂದು ಪಕ್ಷ ಆ ಜನರ ಧ್ವನಿಯಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ