ಮುಂಬೈನ ಭಿವಂಡಿ ಪ್ರದೇಶದ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ದಟ್ಟ ಹೊಗೆ ಆವರಿಸಿಕೊಂಡಿರುವ ದೃಶ್ಯ
ಮುಂಬೈ: ಮುಂಬೈನ ಭಿವಂಡಿ ಪ್ರದೇಶದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಲ್ಲಿ ಕಾಸಿಮ್ ಪುರದ ವಸತಿ ಸಮುಚ್ಛಯದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
4 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ 6 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಇನ್ನು 150ಕ್ಕೂ ಅಧಿಕ ಮಂದಿ ಕಟ್ಟಡದ ಟೆರೆಸ್ ಮೇಲೆ ಹೋಗಿ ಸಹಾಯಕ್ಕಾಗಿ ಮೊರೆ ಇಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕಟ್ಟಡದ ಕೆಳಮಹಡಿಯಲ್ಲಿ ಗಾರ್ಮೆಂಟ್ಸ್ ನಲ್ಲಿ ಬೆಂಕಿ ಆಕಸ್ಮಿಕ ಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ ದಟ್ಟ ಹೊಗೆ ಆವರಿಸಿಕೊಂಡಿದೆ. ಇನ್ನು ಎರಡು ಮತ್ತು ಮೂರನೇ ಅಂತಸ್ತಿನಲ್ಲಿ ಮನೆಗಳಿದ್ದು, ಜನರು ವಾಸವಾಗಿದ್ದಾರೆ. ಕೆಳ ಅಂತಸ್ತಿನಲ್ಲಿ ಬೆಂಕಿ ಸಂಪೂರ್ಣವಾಗಿ ಆವರಿಸಿಕೊಂಡಿರುವ ಹಿನ್ನಲೆಯಲ್ಲಿ ಜನರು ಟೆರಸ್ ಮೇಲೆ ಹೋಗಿ ರಕ್ಷಣೆಗಾಗಿ ಮೊರೆ ಇಡುತ್ತಿದ್ದಾರೆ ಎಂದು ತಿಳಿದು ಬಂದಿದೆ.