ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಸೇರಿದಂ 56 ಗಣ್ಯರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ಪ್ರಧಾನ ಮಾಡಿದರು.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಪದ್ಮ ಪ್ರಶಸ್ತಿ ಸಮಾರಂಭದಲ್ಲಿ ನಟ ರಜನಿಕಾಂತ್, ನಟಿ ಪ್ರಿಯಾಂಕಾ ಚೋಪ್ರಾ, ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಅಮೆರಿಕ ಮಾಜಿ ರಾಭಭಾರಿ ರಾಬರ್ಟ್ ಡಿ ಬ್ಲಾಕ್ ವಿಲ್, ಕನ್ನಡಿಗರಾದ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಎಂ ವೆಂಕಟೇಶ್ ಕುಮಾರ್, ನೃತ್ಯ ಕಲಾವಿದೆ ಪ್ರತಿಭಾ ಪ್ರಹ್ಲಾದ್, ಚಲನಚಿತ್ರ ನಿರ್ದೇಶಕ ಎಸ್ ಎಸ್ ರಾಜಮೌಳಿ ಪದ್ಮ ಗೌರವ ಸ್ವೀಕರಿಸಿದ್ದಾರೆ.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಗೃಹ ಸಚಿವ ರಾಜ್ ನಾಥ್ ಸಿಂಗ್, ಅಮಿತ್ ಷಾ ಮುಂತಾದ ಕೇಂದ್ರ ಸಚಿವರ ಹಾಜರಿದ್ದರು.