ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ 
ಪ್ರಧಾನ ಸುದ್ದಿ

ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಪತ್ನಿ ಆಸ್ಪತ್ರೆಯಲ್ಲಿ ವಿಧಿವಶ

ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಪತ್ನಿ ಫರ್ಜಾನಾ ಖಟೂನ್, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ: ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಪತ್ನಿ ಫರ್ಜಾನಾ ಖಟೂನ್, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು ಪತ್ತೆ ಹಚ್ಚಿದ ದಾಳಿಕೋರರು ಏಪ್ರಿಲ್ ೩ ರಂದು ಅಹ್ಮದ್ ಮೇಲೆ ಗುಂಡಿನ ದಾಳಿಗೈದಿದ್ದರು. ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಉತ್ತರ ಪ್ರದೇಶದ ಬಿಜ್ನೂರು ಜಿಲ್ಲೆಯಿಂದ ಮಧ್ಯರಾತ್ರಿ ಹಿಂದಿರುಗುವಾಗ ನಡೆದ ಈ ದಾಳಿಯಲ್ಲಿ ಅವರ ದೇಹದೊಳಗೆ ೨೧ ಗುಂಡುಗಳು ಹೊಕ್ಕಿದ್ದವು. ಫರ್ಜಾನ ಅವರ ದೇಹಕ್ಕೂ ನಾಲ್ಕು ಗುಂಡುಗಳು ಹೊಕ್ಕಿ ಗಾಯಗೊಂಡಿದ್ದರಿಂದ ಅವರನ್ನು ಎ ಐ ಐ ಎಂ ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಎ ಐ ಐ ಎಂ ಎಸ್ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫರ್ಜಾನ ಸುಮಾರು ಬೆಳಗ್ಗೆ ೧೦:೪೫ ಕ್ಕೆ ಕೊನೆಯುಸಿರೆಳೆದರು ಎಂದು ಎನ್ ಐ ಎ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT