ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಹಂಪ್ ಗಳನ್ನು ತೆಗೆಯಿರಿ : ಕೇಂದ್ರ ಸೂಚನೆ

ವೇಗದ ಮಿತಿಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಹಂಪ್ ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ರಾಜ್ಯ ಸರ್ಕಾರ ಹಾಗೂ

ನವದೆಹಲಿ: ವೇಗದ ಮಿತಿಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಾಕಿರುವ ಹಂಪ್ ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ರಾಜ್ಯ ಸರ್ಕಾರ  ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪಿಡಬ್ಲ್ಯುಡಿ, ಬಿಆರ್‌ಒ ಗಳಿಗೆ ನಿರ್ದೇಶನ ನೀಡಿದೆ.
 
2014ರ ರಸ್ತೆ ಅಪಘಾತ ವರದಿ ಪ್ರಕಾರ ರಸ್ತೆಯಲ್ಲಿರುವ ಹಂಪ್ ಗಳ ಕಾರಣಕ್ಕೆ ಸಂಭವಿಸಿದ ಅಪಘಾತದಲ್ಲಿ 4,726 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಗುಂಡಿಗಳು ಮತ್ತು ವೇಗ ನಿಯಂತ್ರಕಗಳಿಂದಾಗಿ 6,672 ಮಂದಿ ಅಸು ನೀಗಿದ್ದಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗುವ ಕ್ರಮಗಳ ಮಾಹಿತಿಯನ್ನು ಮುಂದಿನ ಬುಧವಾರ ಸಲ್ಲಿಸುವಂತೆ ಸಚಿವಾಲಯ ತಿಳಿಸಿದೆ.

ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದ್ದರೂ ಸ್ಥಳೀಯ ಪ್ರಾಧಿಕಾರಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗ ನಿಯಂತ್ರಣಕ್ಕೆ ಹಂಪ್ ಗಳನ್ನು ಅಳವಡಿಸುವುದು ಅನಪೇಕ್ಷಿತ. ಇವು ಗಂಭೀರ ಅಪಾಯಗಳಿಗೆ ದಾರಿ ಮಾಡಿ ಕೊಡುತ್ತಿದೆ ಎಂದು ಸಚಿವಾಲಯ ಹೇಳಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ