ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾರ್ಮಿಕರ ಪ್ರತಿಭಟನೆಗೆ ಮಣಿದ ಕೇಂದ್ರ, ನೂತನ ಪಿಎಫ್ ನೀತಿ ಕೈಬಿಡಲು ನಿರ್ಧಾರ

ಕಾರ್ಮಿಕರ ಉಗ್ರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೂತನ ಭವಿಷ್ಯ ನಿಧಿ(ಪಿಎಫ್) ಕಾಯ್ದೆಯನ್ನು ಮಂಗಳವಾರ ಹಿಂಪಡೆದಿದೆ.

ನವದೆಹಲಿ: ಕಾರ್ಮಿಕರ ಉಗ್ರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೂತನ ಭವಿಷ್ಯ ನಿಧಿ(ಪಿಎಫ್) ಕಾಯ್ದೆಯನ್ನು ಮಂಗಳವಾರ ಹಿಂಪಡೆದಿದೆ.
ತೀವ್ರ ವಿರೋಧದ ಹಿನ್ನೆಲೆಯಲ್ಲಿ ಫೆಬ್ರುವರಿ 10ರಂದು ಹೊರಡಿಸಲಾಗಿದ್ದ ನೂತನ ಪಿಎಫ್ ನೀತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಹಿಂಪಡೆಯಲಾಗಿದ್ದು, ಹಳೆಯ ಪಿಎಫ್ ನೀತಿಯೇ ಮುಂದುವರೆಯಲಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಸ್ಪಷ್ಟಪಡಿಸಿದ್ದಾರೆ.
ಇದಕ್ಕು ಮುನ್ನ ಪಿಎಫ್ ನೀತಿ ಜಾರಿಯನ್ನು ಮೂರು ತಿಂಗಳ ಕಾಲ ತಡೆಹಿಡಿಯಲಾಗುವುದು ಎಂದು ಬಂಡಾರು ದತ್ತಾತ್ರೇಯ ಅವರು ತಿಳಿಸಿದ್ದರು. 
ಬೆಂಗಳೂರು ಸೇರಿದಂತೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೌಕರ 58 ವರ್ಷದವರೆಗೆ ತನ್ನ ಪಿಎಫ್ ಹಣವನ್ನು ಹಿಂತೆಗೆದುಕೊಳ್ಳುವುದನ್ನು ನಿಷೇಧಿಸುವ ನೂತನ ಪಿಎಫ್ ನೀತಿಯನ್ನು ಜುಲೈ 31ವರೆಗೆ ಮೂರು ತಿಂಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದರು.
ಉದ್ಯೋಗದಾತನ ಭವಿಷ್ಯನಿಧಿ ವಂತಿಗೆ ಹಣವನ್ನು ಹಿಂತೆಗೆದುಕೊಳ್ಳುವುದರ ಮೇಲೆ ವಯೋಮಿತಿಯ ನಿರ್ಬಂಧ ಹೇರುವ ಕ್ರಮಕ್ಕೆ ರಾಷ್ಟ್ರಾದ್ಯಂತ ಹಲವು ಕಡೆಗಳಲ್ಲಿ ಕಾರ್ಮಿಕ ಸಂಘಟನೆಗಳಿಂದ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.
ಫೆಬ್ರುವರಿ 10ರಿಂದ ಜಾರಿಗೊಳಿಸಲು ಉದ್ದೇಶಿಸಲಾಗಿದ್ದ ನೂತನ ಪಿಎಫ್ ನೀತಿಯನ್ನು ವಿರೋಧದ ಹಿನ್ನೆಲೆಯಲ್ಲಿ ಏಪ್ರಿಲ್ 30ರವರೆಗೆ ಮುಂದೂಡಲಾಗಿತ್ತು. ಈ ನಿರ್ಧಾರದ ವಿರುದ್ಧ ನೌಕರರಿಂದ ‘ಆನ್​ಲೈನ್ ಪ್ರಚಾರ ಅಭಿಯಾನ’ ನಡೆದಿತ್ತು. ಸೋಮವಾರ ಹಲವೆಡೆಗಳಲ್ಲಿ ಪ್ರತಿಭಟನಕಾರರ ವಿರುದ್ಧ ಪೊಲೀಸರಿಂದ ಲಾಠಿ ಪ್ರಹಾರವಾಗಿದ್ದರೆ, ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕಾರ್ಮಿಕರ ಪ್ರತಿಭಟನೆ ಉಗ್ರಸ್ವರೂಪಕ್ಕೆ ತಿರುಗಿ 6 ರಾಜ್ಯ ರಸ್ತೆಸಾರಿಗೆ ಬಸ್ಸುಗಳು ಬೆಂಕಿಗೆ ಆಹುತಿಯಾಗಿದ್ದು, ಇತರ ಹಲವು ವಾಹನಗಳು ಹಾನಿಗೊಂಡಿವೆ. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ, ಆಶ್ರುವಾಯು, ಗಾಳಿಯಲ್ಲಿ ಗುಂಡು ಹಾರಾಟವೂ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ