ಪ್ರಧಾನ ಸುದ್ದಿ

ಉತ್ತರಾಖಂಡ್ ರಾಷ್ಟ್ರಪತಿ ಆಡಳಿತ ವಜಾ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

Lingaraj Badiger
ನವದೆಹಲಿ: ಉತ್ತರಾಖಂಡ್ ದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
ಉತ್ತರಾಖಂಡ್ ಹೈಕೋರ್ಟ್ ಆದೇಶ ಪ್ರಶ್ನಿಸಿ ನಾವು ನಾಳೆ ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸುತ್ತಿದ್ದೇವೆ ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಹೇಳಿದ್ದಾರೆ. ಅಲ್ಲದೆ ಕೂಡಲೇ ಕೇಂದ್ರ ಸರ್ಕಾರದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಮುಖ್ಯ ನ್ಯಾಯಾಧೀಶರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರಾಖಂಡ್ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ನೈನಿತಾಲ್ ಹೈಕೋರ್ಟ್, ಏಪ್ರಿಲ್ 29ರಂದು ವಿಧಾನಸಭೆಯಲ್ಲಿ ವಿಶ್ವಾಸಮತಯಾಚಿಸುವಂತೆ ನಿರ್ಗಮಿತ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸೂಚಿಸಿದೆ.
ರಾಷ್ಟ್ರಪತಿ ಆಡಳಿತ ಪ್ರಶ್ನಿಸಿ ಹರೀಶ್ ರಾವತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಹಾಗೂ ನ್ಯಾಯಮೂರ್ತಿ ವಿ.ಕೆ.ಬಿಸ್ತ್ ಅವರನ್ನೊಳಗೊಂಡ ನ್ಯಾಯಪೀಠ, ರಾಷ್ಟ್ರಪತಿ ಆಡಳಿತಕ್ಕೆ ಬ್ರೇಕ್ ಹಾಕಿತ್ತು.
SCROLL FOR NEXT