ಪ್ರಧಾನ ಸುದ್ದಿ

ವಿಜಯ್ ಮಲ್ಯ ಗಡಿಪಾರು ಕೋರಿ ವಿದೇಶಾಂಗ ಸಚಿವಾಲಯಕ್ಕೆ ಇಡಿ ಮನವಿ

Lingaraj Badiger
ನವದೆಹಲಿ: ಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಸಾಲದ ದೊರೆ ವಿಜಯ್ ಮಲ್ಯ ವಿರುದ್ಧ ಕೋರ್ಟ್ ಬಂಧನ ವಾರಂಟ್ ಜಾರಿಯಾಗಿದ್ದು, ಅವರನ್ನು ಆ ದೇಶದಿಂದ ಗಡಿಪಾರು ಮಾಡಲು ಕ್ರಮಕೈಗೊಳ್ಳುವಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದೆ.
ಈ ಸಂಬಂಧ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿರುವ ಇಡಿ, ಮದ್ಯದ ದೊರೆಯ ವಿರುದ್ಧ ಗಡಿಪಾರು ಪ್ರಕ್ರಿಯೆಗಳನ್ನು ಆರಂಭಿಸುವಂತೆ ಕೇಳಿಕೊಂಡಿದೆ. ಅಲ್ಲದೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಶೀಘ್ರದಲ್ಲೇ ಪತ್ರ ಬರೆಯುವುದಾಗಿ ತಿಳಿಸಿದೆ.
ಕಳೆದ ವಾರವಷ್ಟೇ ವಿದೇಶಾಂಗ ಸಚಿವಾಲಯ ರಾಜ್ಯಸಭಾ ಸದಸ್ಯರೂ ಆಗಿರುವ ವಿಜಯ್ ಮಲ್ಯ ಅವರ ರಾಜ ತಾಂತ್ರಿಕ ಪಾಸ್ ಪೋರ್ಟ್ ಅನ್ನು ಅಮಾನತುಗೊಳಿಸಿತ್ತು.
ಐಡಿಬಿಐ ಬ್ಯಾಂಕ್ ನಿಂದ ಪಡೆದ 900 ಕೋಟಿ ರುಪಾಯಿ ಸಾಲವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮುಂದೆ ವಿಜಯ್ ಮಲ್ಯ ವಿಚಾರಣೆಗೆ ಹಾಜರಾಗಬೇಕಿದೆ.
SCROLL FOR NEXT