ಗೃಹ ಸಚಿವರ ಆಪ್ತ ಸಲಹೆಗಾರ ಕೆಂಪಯ್ಯ ವಿರುದ್ಧ ಎಸಿಬಿಗೆ ದೂರು
ನಕಲಿ ಜಾತಿ ಪ್ರಮಾಣಪತ್ರ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆಪ್ತ ಸಲಹೆಗಾರ ಹಾಗೂ ಮಾಜಿ...
ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆಪ್ತ ಸಲಹೆಗಾರ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಗೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಗುರುವಾರ ಎಸಿಬಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದು, ಕೆಂಪಯ್ಯ ಅವರು ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಕ್ಕೆವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮೂಲತಃ ಕುರುಬ ಜನಾಂಗಕ್ಕೆ ಸೇರಿದವರಾದ ಕೆಂಪಯ್ಯ ಕಾಡು ಕುರುಬ ಎಂದು ನೋಂದಾಯಿಸಿ ಎಸ್ಟಿ ಪ್ರಮಾಣಪತ್ರ ಸಲ್ಲಿಸಿ ವಂಚಿಸಿದ್ದಾರೆ ಎಂದು ದಿನೇಶ್ ದೂರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.