ರಾಯಚೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೀರಿಲ್ಲದೇ ಜನ ತತ್ತರಿಸುತ್ತಿದ್ದರೆ, ರಾಜ್ಯದಲ್ಲಿ ಸದ್ಯ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಗುರುವಾರ ಬರದ ಬಿಸಿ ತಟ್ಟಿದೆ.
ಇಂದು ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಕೆ. ಪಾಟೀಲ್, ನಾನು ರಾಜ್ಯದಲ್ಲಿ ಬರ ಇಲ್ಲವೆಂದು ಎಲ್ಲೂ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ.ಅರ್ಥ ಆಗದೆ ಇರುವವರೂ ಹಾಗೆ ಹೇಳಿರಬಹುದು. ಅದನ್ನೆ ಪತ್ರಿಕೆಗಳು ಸುದ್ದಿ ಮಾಡಿವೆ ಎಂದು ಯೂಟರ್ನ್ ಹೊಡೆದಿದ್ದಾರೆ.
1972ರ ನಂತರ ರಾಜ್ಯ ಭೀಕರ ಬರ ಎದುರಿಸುತ್ತಿದ್ದು, ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಆ ನೆಲೆಯಲ್ಲಿ ಮಾಧ್ಯಮಗಳು ಹಾಗೆ ಬರೆಯಬಾರದು. ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬೀಕರ ಬರ ಇದೆ ಎಂದರು.
ಎರಡು ದಿನಗಳ ಹಿಂದೆ ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಎಚ್.ಕೆ.ಪಾಟೀಲ್, ಸದ್ಯ ರಾಜ್ಯದಲ್ಲಿ ಬರ ಪರಿಸ್ಥಿತಿ ಇಲ್ಲ. ಅಂತ್ಯಂತ ಕಠಿಣ ಬೇಸಿಗೆ ಇರುವುದಿರಂದ ನೀರಿನ ಅಭಾವ ಇದೆ ಎಂದಿದ್ದರು. ಅಲ್ಲದೆ ಯಾವಾಗ ಬಿತ್ತನೆ ಸಾಧ್ಯವಿಲ್ಲವೋ ಅಂತಹ ಸಮಯವನ್ನು ಬರಗಾಲವೆಂದು ಕರೆಯಬಹುದು ಎಂದು ಬರಗಾಲಕ್ಕೆ ಹೊಸ ವ್ಯಾಖ್ಯೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics